ಬೆಂಗಳೂರು; ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯ ಬಗ್ಗೆ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತ್ರ ಸೂಕ್ತ ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ… pic.twitter.com/C3EdOoewsv
— DIPR Karnataka (@KarnatakaVarthe) December 15, 2025
ಡಿ.23, 24ರಂದು ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ ಆಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ
ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ








