Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೇಂದ್ರ ಸರ್ಕಾರದ `ಜಿ ರಾಮ್ ಜಿ’ ವಿರುದ್ಧ ಕೋರ್ಟ್ ಗೆ ಮೊರೆ : ಸಚಿವ ಸಂಪುಟ ಮಹತ್ವದ ನಿರ್ಧಾರ

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರಾಜ್ಯಾಧ್ಯಂತ ‘TET ಪರೀಕ್ಷೆ’: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam
KARNATAKA

ನಾಳೆ ರಾಜ್ಯಾಧ್ಯಂತ ‘TET ಪರೀಕ್ಷೆ’: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam

By kannadanewsnow57

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2024ರ ಪರೀಕ್ಷೆಯನ್ನು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರ ವತಿಯಿಂದ ಜೂ.30 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ 12 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಎರಡನೇ ಅಧಿವೇಶನ ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು https://schooleducation.karnataka.gov.in/cacell/kn ವೆಬ್‍ಸೈಟ್‍ನಲ್ಲಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವುದರ ಮೂಲಕ ಪ್ರವೇಶ ಪತ್ರಗಳ ಡೌನ್‍ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚ್‍ಗೆ ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ.

ಪೂರ್ವ ಮುದ್ರಿತ ಓಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನ: ಬದಲಾಯಿಸುವುದು , ತಿದ್ದುವುದು , ಬಿಳಿ ಪ್ಲ್ಯೂಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಬಿಳಿ ಪ್ಲ್ಯೂಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿಲ್ಲ. ಇಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸುವುದಿಲ್ಲ.

ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‍ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್‍ಗಳು, ಲಾಗ್ ಟೇಬಲ್‍ಗಳು, ವೈಟ್‍ಫ್ಲೂಯಿಡ್‍ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.

ವಿಕಲಚೇತನ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿನ ಕಾಲಾವಕಾಶ ನೀಡಿದೆ.

ಆನ್‍ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು(01) ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರವನ್ನು ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TET exam to be held across the state tomorrow: Candidates must follow these rules ನಾಳೆ ರಾಜ್ಯಾಧ್ಯಂತ 'TET ಪರೀಕ್ಷೆ': ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam
Share. Facebook Twitter LinkedIn WhatsApp Email

Related Posts

BIG NEWS : ಕೇಂದ್ರ ಸರ್ಕಾರದ `ಜಿ ರಾಮ್ ಜಿ’ ವಿರುದ್ಧ ಕೋರ್ಟ್ ಗೆ ಮೊರೆ : ಸಚಿವ ಸಂಪುಟ ಮಹತ್ವದ ನಿರ್ಧಾರ

2 Mins Read

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

2 Mins Read

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

2 Mins Read
Recent News

BIG NEWS : ಕೇಂದ್ರ ಸರ್ಕಾರದ `ಜಿ ರಾಮ್ ಜಿ’ ವಿರುದ್ಧ ಕೋರ್ಟ್ ಗೆ ಮೊರೆ : ಸಚಿವ ಸಂಪುಟ ಮಹತ್ವದ ನಿರ್ಧಾರ

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

State News
KARNATAKA

BIG NEWS : ಕೇಂದ್ರ ಸರ್ಕಾರದ `ಜಿ ರಾಮ್ ಜಿ’ ವಿರುದ್ಧ ಕೋರ್ಟ್ ಗೆ ಮೊರೆ : ಸಚಿವ ಸಂಪುಟ ಮಹತ್ವದ ನಿರ್ಧಾರ

By kannadanewsnow57 KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯನ್ನು…

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.