ನವದೆಹಲಿ: ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಕೇಂದ್ರ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅರ್ಹ ಅಭ್ಯರ್ಥಿಗಳ ಜೊತೆ ಪೊಲೀಸರು ಅಮಾನುಷವಾಗಿ ನಡೆದುಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.
2014 ರ ಟಿಇಟಿ ಪರೀಕ್ಷೆಗಳಲ್ಲಿ ಅರ್ಹತೆ ಪಡೆದಿದ್ದರೂ ಮೆರಿಟ್ ಪಟ್ಟಿಯಲ್ಲಿ ಕೈ ಬಿಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರದೇಶದಲ್ಲಿ ಸಿಆರ್ಪಿಸಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು
ಗುರುವಾರ ಮಧ್ಯರಾತ್ರಿ, ಆಂದೋಲನಕಾರರು ಸ್ಥಳವನ್ನು ಖಾಲಿ ಮಾಡುವಂತೆ ಪೊಲೀಸರು ಪದೇ ಪದೇ ಮಾಡಿದ ಮನವಿಯನ್ನುಪ್ರತಿಭಟನಾಕಾರರು ನಿರ್ಲಕ್ಷಿಸಿದ್ದು, ಅವರು ಸರ್ಕಾರಿ ಮತ್ತು ರಾಜ್ಯ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಬೋಧನಾ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ಪಡೆದ ನಂತರವೇ ಹೋಗುವುದಾಗಿ ಒತ್ತಾಯಿಸಿದ್ದಾರೆ. ಈ ವೇಳೆ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ ಎನ್ನಲಾಗುತ್ತಿದೆ.
ಪೊಲೀಸರು ಸುಮಾರು 500 ಪ್ರತಿಭಟನಾಕಾರರನ್ನು ಗುರುವಾರ ಮಧ್ಯರಾತ್ರಿ ಚದುರಿಸಿದ್ದರು. ಪದೇ ಪದೇ ಮನವಿ ಮಾಡಿದರೂ ಪ್ರತಿಭಟನಾಕಾರರು ಸ್ಥಳದಿಂದ ತೆರಳಲು ನಿರಾಕರಿಸಿದಾಗ ಬಲ ಪ್ರಯೋಗ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
#WATCH | West Bengal: Police personnel drag Teacher Eligibility Test (TET) qualified candidates who're protesting near the head office of West Bengal Board of Primary Education in Kolkata regarding job recruitment. Section 144 of CrPC imposed in the area pic.twitter.com/Begne3eODc
— ANI (@ANI) October 21, 2022
ಇದೇ ವೇಳೆ ಪೊಲೀಸರು ಕೆಲವರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಮಹಿಳೆಯರು ಎನ್ನುವುದನ್ನು ನೋಡದೇ ಬಲವಂತವಾಗಿ ಎಳೆದೊಯ್ದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಅಕ್ಟೋಬರ್ 17 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಪ್ರತಿಭಟನಾಕಾರರು, ತಮ್ಮ ನೇಮಕಾತಿ ಇಲ್ಲದೆ ಪ್ರದೇಶವನ್ನು ತೊರೆಯುವುದಿಲ್ಲ ಎಂದು ಮೊದಲು ಪ್ರತಿಪಾದಿಸಿದ್ದು, ಈ ಪ್ರದೇಶದಲ್ಲಿ ಮಹಿಳಾ ಕಾನ್ಸ್ಟೆಬಲ್ಗಳು ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಕಾರಣವಾಯಿತು.
ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) 2014ರ ಅಭ್ಯರ್ಥಿಗಳ ಅನಿರ್ದಿಷ್ಟಾವಧಿ ಧರಣಿ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಅವರು ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ, ಆದರೆ ನೇಮಕಾತಿ ಸಮಯದಲ್ಲಿ ಮಂಡಳಿಯಿಂದ ಕಡೆಗಣಿಸಲಾಗಿದೆ ಎನ್ನಲಾಗುತ್ತಿದೆ.
BIG BREAKING NEWS: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು | Actor Chetan Kumar