ಬೆಂಗಳೂರು: ವಿಜಯಪುರದಲ್ಲಿ ಜನವರಿ 9 ಮತ್ತು 10ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳವನ್ನು ನಡೆಸಲು ನಿಗದಿ ಪಡಿಸಲಾಗಿತ್ತು. ಈ ಸಮ್ಮೇಳನವನ್ನು ಮುಂದೂಡಿಕೆ ಮಡಾಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಆರೋಗ್ಯ ಏರುಪೇರಾಗಿದೆ. ಅವರ ಆರೋಗ್ಯ ಸುಧಾರಿಸುತ್ತದೆ ಎನ್ನುವ ನಮ್ಮೆಲ್ಲರ ನಿರೀಕ್ಷೆ ಫಲಿಸುತ್ತಿಲ್ಲ. ಶ್ರೀಗಳ ಆರೋಗ್ಯ ದಿನೇ ದಿನೇ ಬಿಗಡಾಯಿಸುತ್ತಿದೆ ಎಂಬುದಾಗಿ ಕಳವಳ, ಆತಂಕ ವ್ಯಕ್ತ ಪಡಿಸಿದ್ದಾರೆ.
ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆರೋಗ್ಯ ಏರುಪೇರಾಗಿರುವ ಕಾರಣದಿಂದ ವಿಜಯಪುರದದಲ್ಲಿ ಜನವರಿ 9 ಮತ್ತು 10ರಂದು ನಡೆಯಲಿರುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಂದೂಡಿಕೆ ಮಾಡಲಾಗಿರೋದಾಗಿ ತಿಳಿಸಿದ್ದಾರೆ.
BREAKING NEWS: ಶಿರಾಡಿ ಘಾಟ್ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ