ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು. ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು.
ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4) ಬಿಎನ್ಎಸ್ 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಈ ಪ್ರಕರಣದ ಅಡಿಯಲ್ಲಿ ಶಿಕಾರಿಪುರ ತಾಲ್ಲೂಕಿನ ಭದ್ರಾಪರು ಗ್ರಾಮದ ವೆಸ್ಟ್ ಪೇಪರ್ ವ್ಯಾಪಾರ ಮಾಡುತ್ತಿದ್ದಂತ ಕುಮಾರ್ ಎಂಬಾತನನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂತಹ ಆರೋಪಿಯನ್ನು ಮೇ.25ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ವರದಿ: ವಸಂತ ಬಿ ಈಶ್ವರಗೆರೆ
ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು