ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯನ್ನು ಕೊಚ್ಚಿ ಕೊಂದಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕೋಳೂರಿನಲ್ಲಿ ನಡೆದಿದೆ. ಕೊಡಲಿಂದ ಕೊಚ್ಚಿ ಕೊಂದಿದ್ದ ಆರೋಪಿ ವೀರಭದ್ರಯ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೊಳುರಿನಲ್ಲಿ ವೀರಭದ್ರಯ್ಯ (60) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕಳೆದ ಶನಿವಾರ ದಾಕ್ಷಾಯಿಣಮ್ಮ ಅವರನ್ನು ವೀರಭದ್ರಯ್ಯ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ. ಮಹಿಳೆಯನ್ನು ಕೊಂದ ಬಳಿಕ ವೀರಭದ್ರಯ್ಯ ಪರಾರಿಯಾಗಿದ್ದ. ಆರೋಪಿಗಾಗಿ ಪೊಲೀಸರು ಹುಡುಕಾಡಿದ್ದರು. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಪತ್ತೆಗೆ ಬೆಲೆ ಬೀಸಿದ್ದರು. ಇದೀಗ ವೀರಭದ್ರಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.








