ಬೆಂಗಳೂರು : ಕೋರ್ಟ್ ಗೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮೃತನನ್ನು ಆರೋಪಿ ವಿನೋದ್ ಎಂದು ಗುರುತಿಸಲಾಗಿದೆ. ಈತ 2017 ರಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಆರೋಪಿಯಾಗಿದ್ದು, ವಿಚಾರಣೆಗೆ ಬರದೇ ಈತ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ ಆರೋಪಿ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ಈ ಹಿನ್ನೆಲೆ ನಿನ್ನೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದರು. ಇಂದು ಕೋರ್ಟ್ ಆತನನ್ನು ಕರೆ ತರಲು ಪೊಲೀಸರು ಸಿದ್ದತೆ ನಡೆಸಿದ್ದರು, ಆದರೆ ಅಷ್ಟರಲ್ಲೇ ವಿನೋದ್ ಠಾಣೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಸಿಎಂ ಧೈರ್ಯ ಪ್ರದರ್ಶಿಸಿದರೆ ಕೇಂದ್ರದಿಂದ ಅನುದಾನ ಸಿಗುತ್ತದೆ’ : ‘ನಾಯಿ ಮರಿ’ ಹೇಳಿಕೆಗೆ ಸಿದ್ದು ಸಮರ್ಥನೆ
BIGG NEWS : ವಿಧಾನಸೌಧದ ಬಳಿ 10.5 ಲಕ್ಷ ನಗದು ಹಣ ಪತ್ತೆ ಕುರಿತು ಗೃಹ ಸಚಿವರು ಹೇಳಿದ್ದೇನು..?