Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM
RCB vs SRH IPL 2026 Rajat Patidar vs Ishan Kishan Leadership Clash

ಬ್ರೇಕಿಂಗ್‌ : ಚಿನ್ನಸ್ವಾಮಿಯಲ್ಲಿ ಹೈ-ವೋಲ್ಟೇಜ್ ಕದನ; ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ!

28/03/2026 7:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಶಾಲೆಗಳಲ್ಲಿ ಓದಿದವರ ಸಾಧನೆ ದೊಡ್ಡದು: ಮದ್ದೂರು ಶಾಸಕ ಕೆ.ಎಂ.ಉದಯ್
KARNATAKA

ಸರ್ಕಾರಿ ಶಾಲೆಗಳಲ್ಲಿ ಓದಿದವರ ಸಾಧನೆ ದೊಡ್ಡದು: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0911/02/2026 7:56 PM

ಮಂಡ್ಯ :- ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳೇ ಇಂದು ದೇಶ – ವಿದೇಶಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಮದ್ದೂರು ತಾಲೂಕಿನ ಅರುವನಹಳ್ಳಿ ಗ್ರಾಮದಲ್ಲಿ ಶತಮಾನದ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಶಾಲೆಯ 2 ನೂತನ ಕಟ್ಟಡಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವ್ಯಕ್ತಿಗಳು, ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆ ಎಂಬ ಕೀಳಿರಿಮೆ ಬಿಡಬೇಕು. ಮಕ್ಕಳಿಗೆ ವಿದ್ಯಾರ್ಜನೆ ಎಷ್ಟು ಮುಖ್ಯವೋ ಸಂಸ್ಕಾರವೂ ಅಷ್ಟೇ ಮುಖ್ಯ. ಕಲಿತಂತೆಲ್ಲ ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಯಲ್ಲಿ ತೊಡಗಬೇಕು. ಗುರು, ಹಿರಿಯರಿಗೆ ಗೌರವ ನೀಡುವ ಗುಣ ಬೆಳೆಸಿಕೊಳ್ಳಬೇಕು. ಗ್ರಾಮದಲ್ಲಿ ಶತಮಾನದ ಶಾಲೆ ಎಂಬ ಹೆಗ್ಗಳಿಕೆಗೆ ಪತ್ರವಾಗಿದ್ದ ಶಾಲೆಯ ಕಟ್ಟಡ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ 2 ಶಾಲಾ ಕಟ್ಟಡ ನಿರ್ಮಾಣ ಮಾಡಿ ಉದ್ಘಾಟಿಸಲಾಗಿದೆ.

ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಸೇರಿದಂತೆ ಎಲ್ಲಾ ರೀತಿಯ ಸವಲತ್ತುಗಳು ಸಿಗಲಿದ್ದು, ಇದರ ಸದುಪಯೋಗವನ್ನು ಪಾಲಕರು ಮತ್ತು ಶಿಕ್ಷಕರು ಪಡೆದುಕೊಳ್ಳಬೇಕೆಂದರು.

ಸರ್ಕಾರಿ ಶಾಲೆಗಳಿಗೆ ಈಗಾಗಲೇ ಹಲವಾರು ಸೌಲಭ್ಯಗಳನ್ನು ನೀಡುವ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದಲೂ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಸಹಕಾರ ನೀಡಲಾಗುತ್ತಿದೆ. ಈ ಭಾಗದ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಕೆಲವೇ ದಿನಗಳಲ್ಲಿ ಬನ್ನಹಳ್ಳಿ ಏತ ನೀರಾವರಿ ಪೂರ್ಣಗೊಳಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೂಳಗೆರೆಯ ಬಳಿ ವಿದ್ಯುತ್ ಸಬ್ ಸ್ಟೇಷನ್ ಒಂದುವರೆ ಎಕರೆ ಜಮೀನಿನಲ್ಲಿ ಸುಮಾರು 16 ಕೋಟಿ ವೆಚ್ಚದಲ್ಲಿ ಶೀಘ್ರವಾಗಿ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುತ್ತಿರುವ ಸಮಸ್ಯೆ ದೂರವಾಗಿ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.

ಬಿಇಓ ಧನಂಜಯ ಮಾತನಾಡಿ, ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ
ಶಾಸಕರು ಹೆಚ್ಚಿನ ಆಸಕ್ತಿವಹಿಸಿ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಿಸಿ ತಾಲೂಕಿನಲ್ಲಿ 55 ಶಾಲಾ ಕೊಠಡಿ ನಿರ್ಮಾಣ ಮಾಡಿದ್ದಾರೆ ಜತೆಗೆ ಸಾಧ್ಯವಿರುವ ಕಡೆ ಕೊಠಡಿ ನವೀಕರಣಕ್ಕೆ ಮುಂದಾಗಿರುವುದು ಶ್ಲಾಘನೀಯವೆಂದು ಪ್ರಸಂಸೆ ವ್ಯಕ್ತಪಡಿಸಿದರು.

ತಹಸೀಲ್ದಾರ್ ಪರುಶುರಾಮ್ ಸತ್ತಿಗೆರಿ ಮಾತನಾಡಿ, ಗುಣಾತ್ಮಕ ಶಿಕ್ಷಣ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಇದನ್ನರಿತು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಕೆಡಿಪಿ ಸದಸ್ಯ ಸಿದ್ದರಾಜು ಮಾತನಾಡಿ, ಗ್ರಾಮದ ಸಮಗ್ರ ಅಭಿವೃದ್ಧಿಗೆ 2 ಕೋಟಿಗೂ ಅಧಿಕ ಅನುದಾನ ಕೊಟ್ಟಿರುವ ಶಾಸಕರಿಗೆ ಗ್ರಾಮಸ್ಥರು ಸದಾ ಋಣಿ ಆಗಿರುವುದಾಗಿ ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಶಾಸಕ ಕೆ.ಎಂ.ಉದಯ್ ಹಾಗೂ ಗಣ್ಯರನ್ನು ಗ್ರಾಮಸ್ಥರು ತೆರೆದ ವಾಹನದಲ್ಲಿ ಪೂರ್ಣಕುಂಭ ಮೆರವಣಿಗೆ ಮೂಲಕ ವೇದಿಕೆ ಬಳಿ ಕರೆದುಕೊಂಡು ಬಂದಿದ್ದು ಗಮನ ಸೆಳೆಯಿತು.

ಗ್ರಾಪಂ ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಮಾದೇಶ್ ಜಯರಾಮ್, ಮುಖಂಡರಾದ ಶ್ರೀನಿವಾಸಗೌಡ, ನಾಗರಾಜು, ಎ.ವಿ.ಗಿರೀಶ, ಬಿಳಿಗೌಡ, ವೆಂಕಟೇಶ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಬಡವರಿಗೆ ಸಹಾಯ ಮಾಡೋದು ಇವೆಲ್ಲ ಸರ್ವಾಧಿಕಾರಿ ಧೋರಣೆಯೇ: ಮದ್ದೂರು ಶಾಸಕ ಕೆ.ಎಂ.ಉದಯ್

Share. Facebook Twitter LinkedIn WhatsApp Email

Related Posts

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM2 Mins Read

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM2 Mins Read

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM1 Min Read
Recent News

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM
RCB vs SRH IPL 2026 Rajat Patidar vs Ishan Kishan Leadership Clash

ಬ್ರೇಕಿಂಗ್‌ : ಚಿನ್ನಸ್ವಾಮಿಯಲ್ಲಿ ಹೈ-ವೋಲ್ಟೇಜ್ ಕದನ; ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ!

28/03/2026 7:10 PM

BREAKING : ಸೌದಿ ರಾಜಕುಮಾರ ಜೊತೆ ಪ್ರಧಾನಿ ಮೋದಿ ಮಾತುಕತೆ, ಇಂಧನ ಮೂಲಸೌಕರ್ಯ ಮೇಲಿನ ದಾಳಿಗೆ ಖಂಡನೆ

28/03/2026 6:38 PM
State News
KARNATAKA

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

By kannadanewsnow0928/03/2026 7:36 PM KARNATAKA 2 Mins Read

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆಡಳಿತಾತ್ಮಕ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕ ನೇಮಕಾತಿ…

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.