ಬೆಂಗಳೂರು : ರಾಜ್ಯದ ಸಹಕಾರ ಬ್ಯಾಂಕುಗಳಿಂದ ಸಾಲ ಪಡೆದು 2023ರ ಡಿ. 31ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ ಕಂತುಗಳ ಅಸಲು ಪಾವತಿಸಿದರೆ, ಆ ಮೊತ್ತಕ್ಕೆ ಬಾಕಿ ಇರುವ ಬಡ್ಡಿ ಮನ್ನಾ ಗೆ ಮಾರ್ಚ್ 31ರ ಇಂದು ಕೊನೆಯ ಅವಕಾಶ ನೀಡಲಾಗಿದೆ.
ರೈತರು ರಾಜ್ಯದ ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಗ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ದಿನಾಂಕ:29-02-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ದಿನಾಂಕ:20-01-2024 ರ ಆದೇಶದಲ್ಲಿ ಬಡ್ಡಿಮನ್ನಾ ಮಾಡುವ ಯೋಜನೆಯಲ್ಲಿ ಬಡ್ಡಿ ಮನ್ನಾ ಸೌಲಭ್ಯವನ್ನು ಪಡೆಯಲು ರಾಜ್ಯದ ರೈತರು ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು ನಿಗದಿಪಡಿಸಿದ ದಿನಾಂಕ:29-02-2024ನ್ನು ದಿನಾಂಕ:31-03-2024 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.
ಷರತ್ತುಗಳು :
ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರಣ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.