ಚಿಕ್ಕಮಗಳೂರು: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಇರುವಂತ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಮಹಾನವಮಿಯಂದು ಕಾರ್ಣಿಕ ನುಡಿಯನ್ನು ನುಡಿಯಲಾಗುತ್ತದೆ. ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ನುಡಿಯುತ್ತಾರೆ.
ಇದೀಗ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯನ್ನು ನುಡಿಯಲಾಗಿದ್ದು ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ, ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರದಿಂದ ಇರಬೇಕು ಪರಾಕ್ ಎಂಬುದಾಗಿ ನುಡಿಯಲಾಗಿದೆ.
Sensex Today: ನಿಫ್ಟಿ 24,900 ಸಮೀಪಕ್ಕೆ, ಸೆನ್ಸೆಕ್ಸ್ 200 ಅಂಕ ಏರಿಕೆ
ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!