ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನೇ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮದಂತು ಇಡುವುದನ್ನು ಮರೆಯಲಾಗಿತ್ತು. ಇದು ವ್ಯಾಪಕ ಟೀಕೆಗೆ ಗುರಿಯಾಗಿ ಸರ್ಕಾರಕ್ಕೂ ಮುಜುಗರ ಉಂಟು ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿಯನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ನವೆಂಬರ್.26ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಂದೇ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರ ಇಡುವುದನ್ನು ಮರೆಯಲಾಗಿತ್ತು.
ಈ ಹಿನ್ನಲೆಯಲ್ಲಿ 7 ತಿಂಗಳ ನಂತ್ರ ಪರಿಷತ್ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿಯನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ನೆನಪಿಸಿದ್ದರೂ ಕಡೆಗಣಿಸಿದ ಆರೋಪದಡಿ ಅಮಾನತುಗೊಳಿಸಲಾಗಿದೆ.
UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ
ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು