Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

14/03/2026 11:51 AM

ಬೈರುತ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ: ಹಿಜ್ಬುಲ್ಲಾ ಉನ್ನತ ಕಮಾಂಡರ್ ಹತ್ಯೆಗೈದಿದ್ದಾಗಿ ಇಸ್ರೇಲ್ ವಾಯುಪಡೆ ಘೋಷಣೆ

14/03/2026 11:45 AM

BIG NEWS : ವಾಹನ ಸವಾರರಿಗೆ ಬಿಗ್ ಶಾಕ್ : ಏ.1ರಿಂದ `FasTag’ ವಾರ್ಷಿಕ ಪಾಸ್ ದರ ಹೆಚ್ಚಳ | FasTag pass price hike

14/03/2026 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆಯಿಂದ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ವಿಧಾನಸಭೆ ಕಲಾಪ ನಡೆಸಲು ತೀರ್ಮಾನ
KARNATAKA

BREAKING: ನಾಳೆಯಿಂದ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ವಿಧಾನಸಭೆ ಕಲಾಪ ನಡೆಸಲು ತೀರ್ಮಾನ

By kannadanewsnow0909/12/2024 4:03 PM

ಬೆಂಗಳೂರು: ನಾಳೆಯಿಂದ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ವಿಧಾನಸಭೆಯ ಕಲಾಪವನ್ನು ನಡೆಸಲು ಸದನ ಸಮಿತಿಯು ತೀರ್ಮಾನ ಕೈಗೊಂಡಿದೆ. ಈ ಮೂಲಕ ವಿಧಾನಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆಗೆ ಒತ್ತು ನೀಡಲಾಗಿದೆ.

ಡಿಸೆಂಬರ್.16ರಂದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ವಿಶೇಷ ದಿನವನ್ನು ನಿಗದಿ ಪಡಿಸಲಾಗಿದೆ. ಅಲ್ಲದೇ ನಾಳೆಯಿಂದ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿಧಾನಸಭೆಯ ಕಲಾಪ ನಡೆಸಲು ತೀರ್ಮಾನಿಸಲಾಗಿದೆ.

ಅಕ್ರಮ ಪಡಿತರ ವಿರುದ್ದ ವಿಶೇಷ ಕಾರ್ಯಾಚರಣೆ: ಕೆ.ಎಚ್.ಮುನಿಯಪ್ಪ

ಬೆಳಗಾವಿ ಸುವರ್ಣ ವಿಧಾನಸೌಧ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತç ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

14/03/2026 11:51 AM2 Mins Read

ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

14/03/2026 11:29 AM2 Mins Read

BIG NEWS : `KSRTC’ಯಲ್ಲಿ ಅನುಕಂಪದ ಆಧಾರದ ನೇಮಕಾತಿ : ಸಾರಿಗೆ ಇಲಾಖೆ ಮಹತ್ವದ ಆದೇಶ

14/03/2026 11:13 AM1 Min Read
Recent News

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

14/03/2026 11:51 AM

ಬೈರುತ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ: ಹಿಜ್ಬುಲ್ಲಾ ಉನ್ನತ ಕಮಾಂಡರ್ ಹತ್ಯೆಗೈದಿದ್ದಾಗಿ ಇಸ್ರೇಲ್ ವಾಯುಪಡೆ ಘೋಷಣೆ

14/03/2026 11:45 AM

BIG NEWS : ವಾಹನ ಸವಾರರಿಗೆ ಬಿಗ್ ಶಾಕ್ : ಏ.1ರಿಂದ `FasTag’ ವಾರ್ಷಿಕ ಪಾಸ್ ದರ ಹೆಚ್ಚಳ | FasTag pass price hike

14/03/2026 11:40 AM

BREAKING : ಮೊಜ್ತಾಬಾ ಖಮೇನಿ ಸುಳಿವು ನೀಡಿದವರಿಗೆ 92.47 ಕೋಟಿ ಬಹುಮಾನ ಘೋಷಸಿದ ಅಮೇರಿಕ!

14/03/2026 11:37 AM
State News
KARNATAKA

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

By kannadanewsnow5714/03/2026 11:51 AM KARNATAKA 2 Mins Read

ಇಂದಿನ ದಿನಗಳಲ್ಲಿ ಮಾಂಸಾಹಾರಿಗಳ ಸಂಖ್ಯೆ ಹೆಚ್ಚುತ್ತಿದೆ, ಅದರಲ್ಲೂ ಕಡಿಮೆ ಬೆಲೆಗೆ ಮತ್ತು ಸುಲಭವಾಗಿ ಲಭ್ಯವಿರುವ ಬ್ರಾಯ್ಲರ್ ಚಿಕನ್ ಅತಿ ಹೆಚ್ಚು…

ಗ್ಯಾಸ್ ಸಿಲಿಂಡರ್ ಅಭಾವ: ಅಕ್ರಮ ತಡೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

14/03/2026 11:29 AM

BIG NEWS : `KSRTC’ಯಲ್ಲಿ ಅನುಕಂಪದ ಆಧಾರದ ನೇಮಕಾತಿ : ಸಾರಿಗೆ ಇಲಾಖೆ ಮಹತ್ವದ ಆದೇಶ

14/03/2026 11:13 AM

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

14/03/2026 11:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.