ಕೊಡಗು: ಇಲ್ಲಿನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಪಡಿಸಲಾಗಿದೆ. ಅಕ್ಟೋಬರ್ 17ರ ಶುಕ್ರವಾರ ಮಧ್ಯಾಹ್ನ 1.45ಕ್ಕೆ ತೀರ್ಥೋದ್ಭವ ಆಗಲಿದೆ. ಅಕ್ಟೋಬರ್.17ರಂದು ತೀರ್ಥರೂಪಿಣಿಯಾಗಿ ಕಾವೇರಿ ತಾಯಿಯು ಭಕ್ತರಿಗೆ ತನ್ನ ದರ್ಶವನ್ನು ನೀಡಲಿದ್ದಾಳೆ.
ಈ ಬಗ್ಗೆ ದೇವಸ್ಥಾನದಿಂದ ಮಾಹಿತಿ ನೀಡಲಾಗಿದ್ದು, ಅಕ್ಟೋಬರ್ 17ರಂದು ಮಧ್ಯಾಹ್ನ 1.45ಕ್ಕೆ ತೀರ್ಥೋದ್ಭವ ಆಗಲಿದೆ. ತುಲಾ ಲಘ್ನದಲ್ಲಿ ಕಾವೇರಿ ಮಾತೆ ಆವಿರ್ಭವಿಸಲಿದೆ ಎಂದಿದೆ. ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿಯಿರುವಂತ ತಲಕಾವೇರಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಪವಿತ್ರ ತೀರ್ಥೋದ್ಭವ ಆಗಲಿದೆ.
ವಿಸ್ಮಯಕಾರಿ ಕುಂಡಿಕೆ ಮಾಹಿತಿ ಹೀಗಿದೆ..
ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳುತ್ತಾರೆ.
ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ. ಇಲ್ಲಿನ ಪುಟ್ಟ ಕುಂಡಿಕೆಯಲ್ಲಿನ ಕಾವೇರಿ ಜಲವನ್ನು ತೀರ್ಥವೆಂದು ನಂಬಿ ಪೂಜಿಸುವುದಲ್ಲದೆ ಮನೆಗೆ ಕೊಂಡೊಯ್ಯುತ್ತಾರೆ. ಈ ಕುಂಡಿಕೆಯನ್ನು ಭಕ್ತಿ ಭಾವದಿಂದ ಕಾಣುತ್ತಾರೆ. ನಿತ್ಯ ಇಲ್ಲಿ ಪೂಜೆ ನಡೆಯುತ್ತದೆ.
ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ