ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025 ಕ್ಕೆ ಅನುಮೋದನೆ ಸಿಕ್ಕಿದೆ.
ಕಳೆದ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಲ್ಲಿ ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೂ ಸ್ಥಾನ ನೀಡಬೇಕು ಎಂದು ಸ್ವತಃ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಒತ್ತಾಯಿಸಿದ್ದರು. ಆ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ಸಭಾಪತಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.
ಇಂದು ಸಭಾಪತಿಗಳಿಗೆ ಕೊಟ್ಟ ಮಾತಿನಂತೆ ಸಚಿವ ಕೃಷ್ಣ ಬೈರೇಗೌಡ ಅವರು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯ ತಂಡದಲ್ಲಿ ಪರಿಷತ್ ಸದಸ್ಯರಿಗೂ ಸಹ ಸ್ಥಾನ ಕಲ್ಪಿಸುವ ತಿದ್ದುಪಡಿಯನ್ನು ತಂದಿದ್ದಾರೆ. ಇಂದು ಆ ತಿದ್ದುಪಡಿ ಪರಿಷತ್ನಲ್ಲಿ ಮಂಡಿಸಲ್ಪಟ್ಟು ಅಂಗೀಕಾರಗೊಂಡಿದೆ.
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ