ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದರು.
HEALTH TIPS: ನಿಮಗೆ ಈ ಐದು ಕೆಟ್ಟ ಅಭ್ಯಾಸಗಳಿದ್ದರೆ? ಪೈಲ್ಸ್ ಬರಬಹುದು ಎಚ್ಚರ..
ಸದ್ಯ ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ. ಭ್ರಷ್ಟಾಚಾರ, ಮತಗಳ್ಳತನ ಕೇಸ್ ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ನಮ್ಮ ಕಡೆಯವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ಮೊದಲು ಶಾಸಕ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
HEALTH TIPS: ನಿಮಗೆ ಈ ಐದು ಕೆಟ್ಟ ಅಭ್ಯಾಸಗಳಿದ್ದರೆ? ಪೈಲ್ಸ್ ಬರಬಹುದು ಎಚ್ಚರ..
ಇನ್ನು ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂಬ ಸಚಿವ ಬಿ. ಶ್ರೀರಾಮುಲು ಹೇಳಿಕೆಗೆ ಡಿ.ಕೆ. ಶಿವಕುಮಾರ ಟಾಂಗ್ ನೀಡಿದರು. ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ನೋಡಿಕೊಳ್ಳಲಿ. ಶ್ರೀರಾಮುಲು ಅಣ್ಣನ ವಿಚಾರ ಎಲ್ಲರಿಗೂ ಗೊತ್ತಿದೆ. ರಾಜ್ಯದ ಜನರಿಗೆ ಕುರ್ಚಿ ಕೊಡಿಸಬೇಕೆಂಬುದು ನಮ್ಮ ಬಯಕೆ. ಕುರ್ಚಿ ಕೊಡುವುದು ರಾಜ್ಯದ ಜನ. ರಾಜ್ಯದ ಜನರಿಗೆ ಉತ್ತಮ ಆಡಳಿತದ ಭರವಸೆ ಮೂಡಿಸುತ್ತಿದ್ದೇವೆ ಎಂದು ಹೇಳಿದರು.