ಬೆಂಗಳೂರು : ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಇದೀಗ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿದ್ದಾರೆ
ಶಾಸಕ ರಾಜು ಕಾಗೆ ಪತ್ರ ಬರೆದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿವೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಬೇಡಿಕೆ ಈಡೇರಿಸಿ. ಒಂದು ವೇಳೆ ಮೂರು ಬೇಡಿಕೆ ಈಡೇರದಿದ್ದರೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣ ಸಹೋದರ ಮೇಲೆ ಪ್ರತ್ಯೇಕ ಧ್ವಜಾರೋಹಣ ನಡೆಸಲಾಗುತ್ತದೆ. ಉತ್ತರ ಕರ್ನಾಟಕ ರಾಜ್ಯವನ್ನಾಗಿಸಿ ಎಂದು ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ.
ಸ್ವಪಕ್ಷದ ಶಾಸಕ ರಾಜು ಕಾಗೆಯಿಂದಲೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. 15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೋರಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಆಗುತ್ತಿದ್ದು, ಮಲತಾಯಿ ಧೋರಣೆ ತಾರತಮ್ಯ ಆಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಹೋರಾಟಕ್ಕೆ ಶಾಸಕ ರಾಜು ಕಾಗೆ ಬೆಂಬಲಿಸಿದ್ದಾರೆ.ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಪತ್ರ ಬರೆದಿದ್ದು ಚಳಿಗಾಲದ ಅಧಿವೇಶನದಲ್ಲೂ ಈ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.aa








