ಬೆಂಗಳೂರು: ವಾಣಿಜ್ಯ ತೆರಿಗೆ ನೋಟಿಸ್ ವಿರೋಧಿಸಿ ಜುಲೈ.25ರಂದು ವರ್ತಕರು ಕರೆ ನೀಡಿದ್ದಂತ ಬಂದ್ ವಾಪಾಸ್ ಪಡೆಯಲಾಗಿದೆ ಎನ್ನಲಾಗುತ್ತಿತ್ತು. ಆದರೇ ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಅವರು ಜುಲೈ.25ರಂದು ಕರೆ ನೀಡಿದ್ದಂತ ಬಂದ್ ವಾಪಾಸ್ಸು ಪಡೆದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಂದ್ ಗೆ ಕರೆ ಕೊಟ್ಟಿರುವವರನ್ನು ಬಿಟ್ಟು ಬೇರೆಯವರ ಜೊತೆಗೆ ಸಭೆ ನಡೆಸಿದ್ದಾರೆ. ಬೇರೆಯವರ ಜೊತೆ ಸಭೆ ನಡೆಸಿ ಬಂದ್ ಹಿಂಪಡೆದಿರುವುದಾಗಿ ಸಿಎಂ ಹೇಳಿದ್ದಾರೆ ಎಂದರು.
ಇದು ಸರಿಯಲ್ಲ. ನಾವು ಮುಷ್ಕರ ವಾಪಾಸ್ ಪಡೆದಿಲ್ಲ ಎಂಬುದಾಗಿ ಸಂಘದ ಅಧ್ಯಕ್ಷ ರವಿಶೆಟ್ಟಿ ಬೈಂದೂರು ತಿಳಿಸಿದರು.
ಜುಲೈ.25ರಂದು ಎಲ್ಲಾ ಕಾಂಡಿಮೆಂಟ್ಸ್, ಬೇಕರಿ, ಅಂಗಡಿಗಳು ಬಂದ್ ಆಗುತ್ತೆ. ಸಿಎಂ ಸಿದ್ಧರಾಮಯ್ಯ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದರು.
ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು ಎಂದು ಹೇಳಿದ್ದಾರೆ.
ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.
BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ