ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರ ಆಯ್ಕೆಯನ್ನ ಒಂದು ಕಡೆ ಕನ್ನಡ ಪರ ಸಂಘಟನೆಗಳು ಕನ್ನಡಪಟ ಹೋರಾಟಗಾರರು ವಿರೋಧಿಸುತ್ತಿದ್ದರೆ ಇನ್ನೊಂದು ಕಡೆ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ಹಾಕಿರೋ ಬಂಡವಾಳ ಬರ್ಬೇಕು, ಉದ್ಯೋ ಸೃಷ್ಟಿಯಾಗಬೇಕು ಅದಕ್ಕೆ ಯಾರಾದರೇನು? ಎಂದು ಸಮರ್ಥನೆ ಮಾಡಿದ್ದಾರೆ.
ಇಂದು ಬೆಂಗಳೂರಲ್ಲಿ ಮಾತನಾಡಿದ ಸಚಿವರು ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ ನಾವು 437 ಕೋಟಿ ಲಾಭ ಮಾಡಿದ್ದೇವೆ. ಅದನ್ನ ಸಾವಿರ ಕೋಟಿ ಮಾಡಬೇಕು. ಅದಕ್ಕೆ ಎಲ್ಲರ ಸಹಕಾರ ಮುಖ್ಯ. ನಮ್ಮ ಮಾರ್ಕೆಟಿಂಗ್ ಹೆಚ್ಚಾಗುತ್ತಲ್ಲ, ಹಾಕಿರುವ ಬಂಡವಾಳವೂ ಬರಬೇಕು, ಉದ್ಯೋಗ ಸೃಷ್ಟಿಯೂ ಆಗಬೇಕು. ಅಕ್ಕೆ ಯಾರಾದರೇನು? ಇನ್ವೆಸ್ಟ್ ಕರ್ನಾಟಕದಲ್ಲಿ 15.20 ಸಾವಿರ ಕೋಟಿ ರಾಜ್ಯಕ್ಕೆ ಬಂತಲ್ಲ, ಬಂಡವಾಳ ಹರಿದು ಬಂದಿದೆಯಲ್ಲ ಅಂತ ಸಮರ್ಥನೆ ನೀಡಿದರು.
ಇನ್ನು ಇದೇ ವಿಚಾರವಾಗಿ ಸ್ಯಾಂಡಲ್ವುಡ್ ಕ್ವೀನ್ ಮೋಹಕ ತಾರೆ ನಟಿ ರಮ್ಯಾ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದು, ಬೇರೆಯವರಿಗೆ ದುಡ್ಡು ಹಾಕಿ ಟ್ಯಾಕ್ಸ್ ವ್ಯರ್ಥ ಮಾಡುತ್ತಿದ್ದೀರಿ ಎಂದು ಬೇಸರ ಹೊರ ಹಾಕಿದ್ದಾರೆ. ಪರದೆ ನಟಿಯ ರಾಗಿಣಿಯವರು ಕೂಡ ಇದಕ್ಕೆಲ್ಲ ಹೊರಗಿನವರು ಯಾಕೆ ನಮ್ಮಲ್ಲೆ ಎಂತೆಂತಹ ಸೆಲೆಬ್ರಿಟಿಗಳು ಇದ್ದರು ಎಂದು ತಿಳಿಸಿದ್ದಾರೆ.