Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
KARNATAKA

GOOD NEWS: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

By kannadanewsnow0923/05/2025 4:24 PM

ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂಬುದನ್ನು ಒತ್ತಿ ಹೇಳಿದರು.

ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಾ ಹೊಸದಾಗಿ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8000ರಿಂದ 10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು.

ಸಾರಿಗೆ ಮಾಲಿನ್ಯ ಶೂನ್ಯ ಮಟ್ಟಕ್ಕೆ; ರಾಜ್ಯಕ್ಕೆ 4,500 ಎಲೆಕ್ಟ್ರಿಕ್ ಬಸ್

ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆಯೇ ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಕರ್ನಾಟಕದ ಮಟ್ಟಿಗೆ ದೊಡ್ಡ ತೀರ್ಮಾನ ಮಾಡಿದ್ದೇವೆ. ಪಿಎಂ ಇಡ್ರೈವ್ ಯೋಜನೆ ಅಡಿ ಬಸ್ ಗಳನ್ನು ನೀಡುತ್ತಿದ್ದೇವೆ. 2030ರ ವೇಳೆಗೆ ಭೂಸಾರಿಗೆ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಬೇಕು ಎನ್ನುವ ಉದ್ದೇಶವನ್ನು ಪ್ರಧಾನಿಗಳು ಹೊಂದಿದ್ದಾರೆ. ಅವರ ಕನಸು ಸಾಕಾರಕ್ಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜನೌಷಧ ಔಷಧ ಕೇಂದ್ರಗಳ ತೆರವು; ಕೇಂದ್ರ ಸಚಿವರ ಕಿಡಿ

ರಾಜ್ಯದ ಆಸ್ಪತ್ರೆಗಳ ಆವರಣದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಔಷಧ ಮಾರಾಟ ಮಾಡುತ್ತಿರುವ ಜನೌಷಧ ಕೇಂದ್ರಗಳ ತೆರೆವು ಮಾಡಿಸುತ್ತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಸಿಗುತ್ತಿದ್ದ ಔಷಧಗಳನ್ನು ತಪ್ಪಿಸಿ ಯಾವುದೋ ಲಾಬಿಗೆ ಅನುಕೂಲ ಮಾಡಿಕೊಡುವ ಕುತಂತ್ರ ಇದರ ಹಿಂದೆ ಅಡಗಿರುವಂತೆ ತೋರುತ್ತಿದೆ ಎಂದು ದೂರಿದ ಅವರು; ಜನೌಷಧ ಮಳಿಗೆಗಳನ್ನು ತೆರವು ಮಾಡಿ ಮದ್ಯವನ್ನು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತೀರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವರು ತಮ್ಮ ಗ್ಯಾರಂಟಿಗಳು ವಿಶ್ವಕ್ಕೆ ಮಾದರಿ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಜನರ ಹತ್ತಿರಕ್ಕೆ ಹೋಗಿ ಒಮ್ಮೆ ನೋಡಲಿ. ಅಸಲಿ ಸಮಸ್ಯೆ ಏನೆಂದು ಗೊತ್ತಾಗುತ್ತದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು. ಜನರಿಗೆ ಉಚಿತ ಮಾತ್ರೆ ಕೊಡುವ ಯೋಗ್ಯತೆ ನಿಮ್ಮ ಸರ್ಕಾರಕ್ಕೆ ಇಲ್ಲ. ಮೂಡ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪರ ವಕೀಲ ಕಪಿಲ್ ಸಿಬಲ್ ಅವರು ವಾದ ಮಾಡಲು 1.49 ಕೋಟಿ ಹಣ ಕೊಡ್ತಾ ಇದ್ದೀರಿ. ಆ ಹಣ ಯಾರದು? ಸಿದ್ದರಾಮಯ್ಯ ಅವರ ಮನೆಯ ಹಣವಾ? ಅವರು, ಅವರ ಪತ್ನಿ ಪರವಾಗಿ ಕೋರ್ಟ್ ನಲ್ಲಿ ವಾದಿಸುವುದಕ್ಕೆ ಸರ್ಕಾರ ಯಾಕೆ ಶುಲ್ಕ ನೀಡಬೇಕು ಎಂದು ಅವರು ಪ್ರಶ್ನಿಸಿದರು.

ಸಂಪುಟ ಸಭೆಯಲ್ಲಿ ಕೆಪಿಎಸ್ಸಿ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. 2011ರಲ್ಲಿ ನಡೆದಿದ್ದ ನೇಮಕಾತಿ ಅಕ್ರಮದ ವಿಚಾರಣೆಯನ್ನು ಕೈಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇವರಿಂದ ಕೆಪಿಎಸ್ಸಿ ಸ್ವಚ್ಛ ಮಾಡಲು ಸಾಧ್ಯವೇ? ಅರ್ಕಾವತಿ ರೀಡೂ ಮಾಡಿಕೊಟ್ಟಿದ್ದಕ್ಕೆ ಪ್ರತಿಯಾಗಿ ಅಲ್ಲಿದ್ದ ವ್ಯಕ್ತಿಯನ್ನು ತಂದು ಕೆಪಿಎಸ್ಸಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಒಂದೊಂದು ಹುದ್ದೆಗೆ ಲಕ್ಷಾಂತರ, ಕೋಟ್ಯಂತರ ರೂಪಾಯಿ ಫಿಕ್ಸ್ ಮಾಡಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದರು.

ಈಗ ಮೀಸಲಾತಿ ಅಂತ ಹೊರಟಿದ್ದೀರಿ. ಮೀಸಲಾತಿ ಕೊಟ್ಟು ಏನ್ ಮಾಡ್ತಿರಿ? ನಿಮ್ಮಿಂದ ಉದ್ಯೋಗ ಕೊಡಲು ಆಗುತ್ತಿಲ್ಲ. ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿವೆ. ಎಷ್ಟು ವರ್ಷವಾಯಿತು ಖಾಲಿ ಹುದ್ದೆ ತುಂಬಿ? ಮೀಸಲಾತಿಯಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು ಕೇಂದ್ರ ಸಚಿವರು.

ಶಿವಮೊಗ್ಗ: ನಾಳೆ ಮತ್ತು ಮೇ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

Share. Facebook Twitter LinkedIn WhatsApp Email

Related Posts

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM1 Min Read

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM2 Mins Read

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM1 Min Read
Recent News

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM

ಕದನ ವಿರಾಮದ ನಡುವೆಯೂ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಮುಂದುವರಿದ ಅಸ್ಥಿರತೆ!

24/04/2026 9:18 PM
State News
KARNATAKA

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

By kannadanewsnow0924/04/2026 10:12 PM KARNATAKA 1 Min Read

ಬೆಂಗಳೂರು: ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್…

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM

BREAKING: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ: ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

24/04/2026 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.