ಮಂಡ್ಯ : ಕುಟುಂಬ ರಾಜಕಾರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಟಿ ಎಸ್ ಛತ್ರ ಗ್ರಾಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಮೊದಲ ಮಗನನ್ನು ಬಳಸಲ ನೋಡಿದರು. ಅವರ ಅಕಾಲಿಕ ಮರಣದಿಂದ ಎರಡನೇ ಮಗನನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ಕರೆದಂದು ವಸೂಲಿ ಮಾಡುತ್ತಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟು ಜನ ಅಧಿಕಾರ ಪಡೆದಿದ್ದಾರೆ? ಸಹೋದರನನ್ನು ಕೆಎಂಎಫ್ ಅಧ್ಯಕ್ಷ ನನ್ನಾಗಿ ಮಾಡಲು ಮುಂದಾಗಲಿಲ್ಲವೇ?
ಎರಡು ಮೂರು ಜನ ಶಾಸಕರು ಇರುವ ಕುಟುಂಬ ಸಾಕಷ್ಟಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ದೇವೇಗೌಡರು ವಸೂಲಿ ಮಾಡಲು ನಮ್ಮನ್ನು ರಾಜಕೀಯಕ್ಕೆ ತರಲಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಾವು ರಾಜಕೀಯಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.








