ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆ ಮಾಡಲಾಗಿದೆ.
ಇಂದು ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ನಡೆದಿರುವಂತ ಕಾಮಗಾರಿಗಳ ಅನುಷ್ಠಾನದಲ್ಲಿನ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸಿದೆ.
ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆಯಾಗಿರುವಂತ ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಸುಧಾರಣಾ ಕ್ರಮಕೈಗೊಳ್ಳಲು ಸಹ ಶಿಫಾರಸ್ಸನ್ನು ಆಯೋಗ ಮಾಡಿದೆ.
ಅಂದಹಾಗೇ ಬಿಬಿಎಂಪಿ ಕಾಮಗಾರಿ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಹೀಗಾಗಿ ಆಗಸ್ಟ್.5, 2023ರಂದು ತಜ್ಞರನ್ನೊಳಗೊಂಡ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿತ್ತು. ಡಿಸೆಂಬರ್.15ರಂದು ತನಿಖಾ ಸಮಿತಿ ವಾಪಾಸ್ ಕೂಡ ಸರ್ಕಾರ ಪಡೆದಿತ್ತು. ಆ ಬಳಿಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ವಿಚಾರಣಾ ಆಯೋಗಕ್ಕೆ ತನಿಖೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ನಡೆಸಲು ಮೂರು ಪರಿಶೀಲನಾ ಮಾರ್ಗವನ್ನು ಆಯೋಗ ಅನುಸರಿಸಿತ್ತು.
ರಾಜ್ಯದ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸದಿದ್ದರೇ ‘ಹಾಲಿ ರೋಸ್ಟರ್’ನಂತೆ ಚುನಾವಣೆ: ಹೈಕೋರ್ಟ್ ಎಚ್ಚರಿಕೆ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ