ಮಂಡ್ಯ : ಶೋಷಣೆಗೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಅಧ್ಯಕ್ಷರಾದ ಡಾ. ಎಲ್ ಮೂರ್ತಿ ಅವರು ಹೇಳಿದರು.
ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 20 ದಿನಗಳ ಹಿಂದೆ ನಾನು ಆಯೋಗಕ್ಕೆ ನೂತನ ಅಧ್ಯಕ್ಷನಾಗಿ ನೇಮಕ ಕೊಂಡಿದ್ದೇನೆ, ಆಯೋಗದಲ್ಲಿ ಒಟ್ಟಾರೆ 1503 ಪ್ರಕರಣಗಳು ಹಾಗೂ 4943 ಪತ್ರ ವ್ಯವಹಾರದ ಕಡತಗಳು ಬಾಕಿ ಇವೆ ಎಲ್ಲವನ್ನೂ ಶೀಘ್ರವಾಗಿ ವಿಲೇವಾರಿ ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು.
ಆಯೋಗದ ಅಧ್ಯಕ್ಷನಾದ ನಂತರ ಮೊದಲು ನಾನು ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಸುತಿದ್ದೇನೆ, ಮಂಡ್ಯ ಜಿಲ್ಲೆಯ ಸ್ಥಿತಿ ಗತಿಗಳ ಕುರಿತು ಹತ್ತಿರದಿಂದ ನಾನು ಬಲ್ಲೆ ಏಕೆಂದರೆ ನಾನು ಸಹ ಮಂಡ್ಯ ಜಿಲ್ಲೆಯವನೆ. ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ವ್ಯಾಜ್ಯಗಳಲ್ಲಿ ಇತ್ಯಾರ್ಥ ಮಾಡಬಹುದಾದ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಡಿ ರಾಜ್ಯದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಸಮುದಾಯದ ಜನರ ಕಷ್ಟ ಕಾರ್ಪಣ್ಯಗಳು ತಿಳಿದಿದೆ ಎಲ್ಲವನ್ನೂ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ತಿಂಗಳಿಗೆ ರಾಜ್ಯದ 3 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಾಗಿ ಕಂದಾಯ, ದೌರ್ಜನ್ಯ, ಖಾತೆ, ಪಹಣಿ, ಸ್ಮಶಾನದ ವಿಚಾರಗಳ ಕುರಿತಾಗಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಮುಖ್ಯವಾಗಿ ಎಸ್ ಇ ಪಿ/ಟಿ ಎಸ್ ಪಿ ಹಣ ಸರಿಯಾಗಿ ಅರ್ಹ ಯೋಜನೆಗಳಿಗೆ ತಲುಪಬೇಕು. ಇನ್ನೊಂದು ತಿಂಗಳ ಒಳಗೆ ಜಿಲ್ಲೆಯಲ್ಲಿ ದೊಡ್ಡದಾಗಿ ಕುಂದು ಕೊರತೆ ಸಭೆ ಆಯೋಜನೆ ಮಾಡಿ ಎಲ್ಲರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಅಧಿಕಾರಿಗಳು ಎಸ್ ಸಿ/ಎಸ್ ಟಿ ಸಮುದಾಯಗಳ ನಾಗರೀಕ ಹಕ್ಕುಗಳು, ಶಿಕ್ಷಣ ಹಾಗೂ ಅವರನ್ನು ಸಾಮಾಜಿಕವಾಗಿ ಸದೃಢ ಮಾಡಲು ಶ್ರಮ ವಹಿಸಿ. ಪದವಿ, ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ದೊರಕಿಸಿ ಕೊಡುವ ದೃಷ್ಟಿಯಿಂದ ತರಬೇತಿ ನೀಡಿ ಎಂದು ತಿಳಿಸಿದರು.
ಪರಿಶಿಷ್ಟ ಜನಾಂಗದವರಿಗೆ ಸ್ಮಶಾನ ನೀಡುವಾಗ ಸರ್ವೇ ನಡೆಸಿ ಯಾವ ಗ್ರಾಮದಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರು ಹಾಗೂ ಸ್ವಂತ ಜಮೀನು ಇಲ್ಲದ ಪರಿಶಿಷ್ಟರಿಗೆ ಪ್ರಾಮುಖ್ಯತೆಯ ಆಧಾರದ ಮೇಲೆ ಸ್ಮಶಾನ ಮಂಜೂರು ಮಾಡಿ, ಅಧಿಕಾರಿಗಳು ಸ್ಮಶಾನ ಮಂಜೂರು ಮಾಡಿ ಸುಮ್ಮನೆ ಬಿಡುವಂತಿಲ್ಲ ಸ್ಮಶಾನವನ್ನು ಅಭಿವೃದ್ಧಿ ಮಾಡುವುದು ಸಹ ಅಧಿಕಾರಿಗಳ ಜವಾಬ್ದಾರಿ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ ಕುಮಾರ ಅವರು ಮಾತನಾಡಿ ಅಧಿಕಾರಿಗಳು ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯದ ( ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಒಟ್ಟು 102 ಇದೆ ಅದರಲ್ಲಿ 85 ಸ್ವಂತ ಕಟ್ಟಡ 17 ಬಾಡಿಗೆ ಕಟ್ಟಡಗಳು ಇದೆ. 2025-26 ನೇ ಸಾಲಿನಲ್ಲಿ 10958 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 1301 ಸ್ಮಶಾನಗಳು ಇದ್ದು ಪ್ರತ್ಯೇಕವಾಗಿ 195 ಸ್ಮಶಾನಗಳು ಪರಿಶಿಷ್ಟ ಜಾತಿ ಜನಾಂಗದವರಿಗೆ ಸೇರಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಗತಿ ಕಾಲೋನಿ ಯೋಜನೆ ಇಡೀ 2023 ರಿಂದ ಸದರಿ ವರ್ಷದವರೆಗೂ 222 ಕಾಮಗಾರಿಗಳನ್ನು ಗುರುತಿಸಲಾಗಿದೆ ಅದರಲ್ಲಿ 97 ಕಾಮಗಾರಿಗಳು ಮುಕ್ತಾಯಗೊಂಡಿದ್ದು 124 ಕಾಮಗಾರಿಗಳು ಪ್ರಗತಿ ಹಂತದಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ವರ್ಗಗಳಿಗೆ ಸಂಬಂಧಿಸಿದ 3 ಸಭೆಗಳನ್ನು ಮಾಡಲಾಗಿದೆ. ಎಲ್ಲಾ ತಾಲೂಕುಗಳ ತಹಶೀಲ್ದಾರ್ ಗಳು ತಾಲ್ಲೂಕು ಮಟ್ಟದಲ್ಲಿ ಕುಂದು ಕೊರತೆಗಳ ಸಭೆ ನಡೆಸಿ. 2025ನೇ ಸಾಲಿನಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಮೇಲಿನ ದೌರ್ಜನ್ಯ ಒಟ್ಟು ಪ್ರಕರಣಗಳು 67 ಸಂತ್ರಸ್ತರಿಗೆ ಒಟ್ಟು ರೂ 7512500 ಹಣವನ್ನು ಮಂಜೂರು ಮಾಡಲಾಗಿದೆ ಎಂದರು.
ನಂತರ ಸಂಘ ಸಂಸ್ಥೆಗಳಿಂದ ಅಹವಾಲುಗಳನ್ನು ಸ್ವೀಕರ ಮಾಡಿದರು.
ಸಭೆ ಆರಂಭಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಇರುವ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಕಾರ್ಯದರ್ಶಿ ಶಿವರಾಂ, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ
BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!








