ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

ಶಿವಮೊಗ್ಗ: ಸಿದ್ದರಾಮಯ್ಯನವರ ಸರಕಾರ ಕೊಟ್ಟ ಅನ್ನಭಾಗ್ಯ ಯೋಜನೆಗೆ ಕಾಂಗ್ರೆಸ್ ಸರಕಾರವೇ ಕನ್ನ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಅದನ್ನು 5 ಕೆಜಿಗೆ ಇಳಿಸಿದರು. ಈಗ ಅದನ್ನೂ ನಿಲ್ಲಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯವು ಇವತ್ತು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ ಎಂದು ಅವರು ವಿಶ್ಲೇಷಿಸಿದರು. ರಾಜ್ಯ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಣ ಕ್ರೋಡೀಕರಿಸಲು … Continue reading ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ