ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೇಳಿದೆ.
ಇದಕ್ಕಾಗಿ ನಾಳೆ ದೆಹಲಿಗೆ ಬುಲಾವ್ ಕೂಡ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಹೀಗಾಗಿ ನಾಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರೊಂದಿಗೆ ಚರ್ಚೆ ನಡೆಸಲಿದ್ದು, ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ.
Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast