ಬೆಂಗಳೂರು: ನಿನ್ನೆ ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂತಹ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ವಶಕ್ಕೆ ನೀಡಿ ಆದೇಶಿಸಿದೆ.
ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ಕೋಲಾರ ಹಾಗೂ ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋ ವೈದ್ಯ ಡಾ.ನಾಗರಾಜ್ ಶಂಕಿತ ಉಗ್ರರಿಗೆ ಸಹಾಯ ಮಾಡುತ್ತಿದ್ದ ಕಾರಣ ಬಂಧಿಸಲಾಗಿತ್ತು.
ಇನ್ನೂ ಉತ್ತರ ವಿಭಾಗದ ನಗರ ಶಸ್ತ್ರ ಮೀಸಲು ಪಡೆಯ ಎಎಸ್ಐ ಚಾಂದ್ ಪಾಷಾ ಹಾಗೂ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾಳನ್ನು ಎನ್ಐಎ ಬಂಧಿಸಲಾಗಿತ್ತು. ಇಂದು ಸಿಟಿ ಸಿವಿಲ್ ಕೋರ್ಟ್ ಗೆ ಶಂಕಿತ ಮೂವರು ಉಗ್ರರನ್ನು ಹಾಜರುಪಡಿಸಲಾಗಿತ್ತು. ಈ ಮೂವರನ್ನು 6 ದಿನಗಳ ಕಾಲ ಎನ್ಐಎ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.