ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಮೂಲಕ ಮಹತ್ವದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆಯ ಅನುಮೋದನೆಯನ್ನು ನೀಡಲಿದ್ದಾರೆ.
ಈ ಕುರಿತಂತೆ ಸಚಿವ ಸಂಪುಟ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 15-02-2024ರ ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ನಾಳೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಲಿದ್ದಾರೆ. ಈ ಸಂಪುಟ ಸಭೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಾಧ್ಯತೆ ಇದೆ.
BREAKING: ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ | Rajya Sabha Election 2024
1056 ಖಾಲಿ ಹುದ್ದೆಗಳ ಭರ್ತಿಗೆ ‘UPSC’ ಅಧಿಸೂಚನೆ ಬಿಡುಗಡೆ : ಅರ್ಜಿ ಸಲ್ಲಿಕೆಗೆ ‘ಡೈರೆಕ್ಟ್ ಲಿಂಕ್’ ಇಲ್ಲಿದೆ