ಬೆಂಗಳೂರು: ಪಿಜಿಸಿಇಟಿ-2025ಕ್ಕೆ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಕೆಇಎ ಗುಡ್ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 10 ಗಂಟೆಯವರೆಗೆ ಪಿಜಿ ಸಿಇಟಿ-2025ಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, PGCET-25 ಗೆ ಅರ್ಜಿ ಸಲ್ಲಿಸಲು ಮೇ 16ರ ಬೆಳಿಗ್ಗೆ 10 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಅಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರು ತಕ್ಷಣ ಅರ್ಜಿ ಸಲ್ಲಿಸುವುದು. ಅದರ ನಂತರ ದಿನಾಂಕ ವಿಸ್ತರಣೆ ಇರುವುದಿಲ್ಲ ಎಂದಿದೆ.
#PGCET-25 ಗೆ ಅರ್ಜಿ ಸಲ್ಲಿಸಲು ಮೇ 16ರ ಬೆಳಿಗ್ಗೆ 10 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಅಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರು ತಕ್ಷಣ ಅರ್ಜಿ ಸಲ್ಲಿಸುವುದು. ಅದರ ನಂತರ ದಿನಾಂಕ ವಿಸ್ತರಣೆ ಇರುವುದಿಲ್ಲ.@CMofKarnataka@drmcsudhakar@KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 15, 2025