ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ₹9,823.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ.
ಈ ಸಭೆಯಲ್ಲಿ ಮೂರು ಹೊಸ/ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ₹9,823.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ.
ಸಭೆಯಲ್ಲಿ ಮೂರು ಹೊಸ/ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ… pic.twitter.com/HmyDV5ZJgU
— DIPR Karnataka (@KarnatakaVarthe) December 23, 2024
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5605 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.
ಇಂದಿನ ಸಭೆಯಲ್ಲಿ ಮೂರು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಮೆ. ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3500 ಉದ್ಯೋಗ ಸೃಷ್ಠಿಯಾಗುತ್ತಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯ ಮುಖ್ಯಾಂಶಗಳು:
• ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 9 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್ ಮ್ಯಾನುಫಾಕ್ಚರಿಂಗ್ ಕ್ಲಸ್ಟರ್ ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚನೆ ನೀಡಿದರು.
• ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು.
• ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಬಂದೇ ಬರುತ್ತದೆ, ನಮ್ಮ Unfinished ಅಜೆಂಡಾ ಪೂರ್ಣ: HDK ವಿಶ್ವಾಸ
ಜ.17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ 2025: ಸಿಎಂ ಸಿದ್ಧರಾಮಯ್ಯ ಲಾಂಛನ ಬಿಡುಗಡೆ
BIG NEWS: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್