ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ.
ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅದರ ಬೆನ್ನಲ್ಲೇ ಇಂದು ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸಹ ಏರ್ಪಡಿಸಲಾಗಿತ್ತು. ಆದರೆ ಇದೀಗ ಸತೀಶ್ ಜಾರಕಿಹೊಳಿ ದಿಡೀರ್ ಎಂದು ಡಿನ್ನರ್ ಮೀಟಿಂಗ್ ರದ್ದುಪಡಿಸಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲ ಮೂಡಿಸಿದೆ.








