ಬೆಂಗಳೂರು: ರಾಜ್ಯದ 8, 9 ಮತ್ತು 10ನೇ ತರಗತಿ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡದಂತೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ತಡೆ ನೀಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಮುಖ್ಯಸ್ಥರಿಗೆ ಪತ್ರಬರೆದು ಸೂಚಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ.?
ಘನ ಸರ್ವೋಚ್ಚ ನ್ಯಾಯಾಲಯವು ಮುಂದಿನ ಆದೇಶದವರೆಗೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ (SA-1) ಫಲಿತಾಂಶವನ್ನು ಪ್ರಕಟಿಸದಿರಲು ಹಾಗೂ ಯಾವುದೇ ಶಾಲೆಯು ಈವರೆವಿಗೂ ಮಧ್ಯವಾರ್ಷಿಕ ಪರೀಕ್ಷೆ (SA-1) ಅನ್ನು ನಡೆಸಿಲ್ಲದಿದ್ದಲ್ಲಿ ಅಂತಹ ಶಾಲೆಯು ಪರೀಕ್ಷೆಯನ್ನು ನಡೆಸದಿರಲು ಆದೇಶಿಸಿರುತ್ತದೆ. ಅದರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (SA-1) ಫಲಿತಾಂಶವನ್ನು ಮುಂದಿನ ಆದೇಶದವರೆಗೂ ಪುಕಟಿಸದಂತೆ ಸಂಬಂಧಿಸಿದ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಲು ತಿಳಿಸಿದೆ ಎಂದಿದ್ದಾರೆ.
ಬಾಹ್ಯಾಕಾಶ ಕ್ಷೇತ್ರಕ್ಕೆ 1,000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ
ಗಡಿಯಾರದ ಚಿಹ್ನೆಯನ್ನು ಉಳಿಸಿಕೊಳ್ಳಲು ಅಜಿತ್ ಪವಾರ್ ಬಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ