ಬೆಂಗಳೂರು : ದ್ವಿತೀಯ ಪಿಯಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.. ಮಕ್ಕಳ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪಿಯುಸಿಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಯೆಸ್, ಪಿಯು ಪರೀಕ್ಷಾ ಪ್ರಶ್ನೆ ಪತ್ರಿಕೆ ಮಾದರಿ ಬದಲಿಸಲು ಹೊರಟ ಶಿಕ್ಷಣ ಇಲಾಖೆ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲೂ 15ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ಚಿಂತನೆ ನಡೆಸುತ್ತಿದೆ.ಇದರಿಂದ ಮಕ್ಕಳು ಭವಿಷ್ಯದಲ್ಲಿ ಸ್ಪರ್ದಾತ್ಮಕ ಪರೀಕ್ಷೆಗಳನ್ನು ಬರೆಯಲು ಬಹಳ ಸುಲಭವಾಗುತ್ತದೆ ಎಂದು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಪದವಿ ಕಾಲೇಜುಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕವೇ ಮುಖ್ಯವಾಗಿದ್ದು, ಹೌದು, ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಕೆಲವು ಸುಧಾರಣೆಗಳನ್ನು ತರಲು ಮುಂದಾಗಿದೆ.2023-24 ರಿಂದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದು ಕೇವಲ ದ್ವಿತೀಯ ಪಿಯುಸಿಗೆ ಮಾತ್ರವಲ್ಲದೇ ಪ್ರಥಮ ಪಿಯುಸಿಗೂ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ಕೆಲವು ಹಿರಿಯ ಅಧಿಕಾರಿಗಳು ಪಿಯುಸಿಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸುವಂತೆ ಪ್ರಸ್ತಾಪ ಮಾಡಿದ್ದಾರೆ. ಮಕ್ಕಳ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪಿಯುಸಿಯಲ್ಲಿ ಬಹುಪ್ರಶ್ನೆ ಮಾದರಿ ಅಳವಡಿಸಿದ್ರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಅನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಯೋಜಿಸಿದ್ದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಅನ್ನು ಸರ್ಕಾರ ಜಾರಿಗೆ ತರಲಿದೆ. 75 ವರ್ಷಗಳ ನಂತರ ಸ್ವಾವಲಂಬಿ ಸಮಾಜಕ್ಕಾಗಿ ಎನ್ಇಪಿಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಬದಲಾವಣೆ ಇಂದಿನ ಅಗತ್ಯವಾಗಿದೆ. ಎನ್ಇಪಿ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮೊಘಲರು ಮತ್ತು ಬ್ರಿಟಿಷರು ಪರಿಚಯಿಸಿದ ವ್ಯವಸ್ಥೆಗಳು, ನೀತಿಗಳು ಮತ್ತು ಆಡಳಿತದ ವಿರುದ್ಧ ಭಾರತೀಯರು ಹೋರಾಡಿದ್ದರು ಎಂದು ತಿಳಿಸಿದ್ದಾರೆ.
BIGG NEWS : ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ʼರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ʼ : ಪೊಲೀಸರು ಫುಲ್ ಅಲರ್ಟ್
BREAKING NEWS: ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ | IT raid