ಬೆಂಗಳೂರು: ರೇಣುಕಸ್ವಾಮಿ ಕೊಲೆಗೆ ಬಳಸಿದ್ದ ಎಲೆಕ್ಟ್ರಿಕಲ್ ಮೆಗ್ಗಾರ್‌ ಯಂತ್ರ ಪತ್ತೆ ಹಚ್ಚುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು 9ನೇ ಆರೋಪಿ ರಾಜು ಅಲಿಯಾಸ್‌ ಧನರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ದರ್ಶನ್‌ ಮತ್ತು ಧನರಾಜುಗೆ ನೇರ ನೇರ ಸಂಪರ್ಕವೇ ಇಲ್ಲ ಎನ್ನಲಾಗಿದೆ.

ಜೊತೆಗೆ ಕೆಲಸ ಮಾಡುತ್ತಿದ್ದವನ ಮಾತು ಕೇಳಿ ಎಲೆಕ್ಟ್ರಿಕ್ ಡಿವೈಸ್ ತಂದು ಸಹಾಯ ಮಾಡಿದ್ದ ಎನ್ನಲಾಗಿದೆ. ಜೂನ್‌ 8 ರಂದು ಮೆಗ್ಗಾರ್ ಸಾಧನದ ಜೊತೆ ರಾಜುನನ್ನು ಪಟ್ಟಣಗೆರೆ ಶೆಡ್‌ಗೆ ನಂದೀಶ್ ಕರೆಸಿಕೊಂಡಿದ್ದ. ಪ್ಲ್ಯಾನ್‌ನಂತೆ ರಾಜುವಿನಿಂದ ಎಲೆಕ್ಟ್ರಿಕಲ್ ಮೆಗ್ಗಾರ್‌ ಯಂತ್ರವನ್ನು ನಂದೀಶ್ ತರಿಸಿಕೊಂಡಿದ್ದರು. ಆ ಮೆಗ್ಗಾರ್‌ ಯಂತ್ರವನ್ನು ಬಳಸಿ ರೇಣುಕಾಸ್ವಾಮಿಗೆ ಆರೋಪಿಗಳು ಕರೆಂಟ್ ಶಾಕ್ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.ಸದ್ಯ ರಾಜುವನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾಜು ಜೊತೆ ಎಲೆಕ್ಟ್ರಿಕಲ್ ಮೆಗ್ಗರ್ ಯಂತ್ರ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಧನರಾಜ್‌ನನ್ನು ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ವರ್ಕ್‌ ಮಾಡ್ತಾ ಇದ್ದಾರೆ ಎನ್ನಲಾಗಿದೆ.

Share.
Exit mobile version