ಬೆಂಗಳೂರು: ಕರ್ನಾಟಕದ ಮಾದರಿಯನ್ನು ಇಡೀ ದೇಶವೇ ಪಾಲಿಸುತ್ತಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಪ್ರಕೃತಿ ನಿಯಮದಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಗಾಳಿ, ಸೂರ್ಯ, ನೀರು ಜೊತೆಗೆ ಆಹಾರ ಇಲ್ಲದೇ ನಾವು ಜೀವಿಸಲು ಸಾಧ್ಯವಿಲ್ಲ. ಹಸಿದವರಿಗೆ ಮಾತ್ರ ಗೊತ್ತು ಅನ್ನದ ಬೆಲೆ. ಇಂದು ವಿಶ್ವ ಆಹಾರ ದಿನ ಆಚರಿಸುತ್ತಿದ್ದೇವೆ. ಜವಾಹರ್‌ಲಾಲ್ ನೆಹರು ಅವರ ಕಾಲದಿಂದಲೂ ಆಹಾರ ವಿತರಿಸುವ ವ್ಯವಸ್ಥೆ ಪ್ರಾರಂಭವಾಯಿತು. ಇಂದಿರಾ ಗಾಂಧಿ ಅವರು ಉಳುವವನಿಗೆ ಭೂಮಿ ಕೊಟ್ಟರು. ದೇವರಾಜ ಅರಸು ಅವರ ಕಾಲದಲ್ಲಿ ರೈತರಿಗೆ ಶಕ್ತಿಯನ್ನು ಕೊಡಬೇಕೆಂದು ಪಡಿತರ ಚೀಟಿ ವ್ಯವಸ್ಥೆಯನ್ನು ಇಂದಿರಾಗಾಂಧಿ ಅವರು ಪರಿಚಯಿಸಿದರು. ನಮ್ಮ ರಾಜ್ಯದಲ್ಲಿ ಯಾರೂ ಹಸಿವಿನಿಂದ ಇರಬಾರದೆಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ‘ಅನ್ನಭಾಗ್ಯ ಕಾರ್ಯಕ್ರಮ’ ಘೋಷಣೆ ಮಾಡಿದರು ಎಂದಿದ್ದಾರೆ.
ಎಸ್‌ಎಂ ಕೃಷ್ಣ ಅವರ ಕಾಲದಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಸರ್ಕಾರದಿಂದಲೇ ಬಿಸಿಯೂಟ ಕಾರ್ಯಕ್ರಮ ರೂಪಿಸಿದರು. 10 ಕೆಜಿ ಅಕ್ಕಿ ಬದಲಿಗೆ ಪಡಿತರರಿಗೆ 5 ಕೆಜಿ ಅಕ್ಕಿ, ಇನ್ನು 5 ಕೆಜಿ ಇಂದಿರಾ ಕಿಟ್ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ವಿತರಿಸಲು ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಜನರ ಆದಾಯ ಪಾತಾಳಕ್ಕೆ ಹೋಗಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿತ್ತು. ಇದಕ್ಕೆ ಪರಿಹಾರ ಒದಗಿಸಲು ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ನಮ್ಮ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ನುಡಿದಂತೆ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದೇವೆ. ಗ್ಯಾರಂಟಿಗಳನ್ನು ಟೀಕಿಸಿದವರೇ ಇದೀಗ ಬೇರೆ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 'ವಿಶ್ವ ಆಹಾರ ದಿನಾಚರಣೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ.
ಪ್ರಕೃತಿ ನಿಯಮದಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಗಾಳಿ, ಸೂರ್ಯ, ನೀರು ಜೊತೆಗೆ ಆಹಾರ ಇಲ್ಲದೇ ನಾವು ಜೀವಿಸಲು ಸಾಧ್ಯವಿಲ್ಲ. ಹಸಿದವರಿಗೆ ಮಾತ್ರ ಗೊತ್ತು… pic.twitter.com/IlmSOvVbxJ— DK Shivakumar (@DKShivakumar) October 16, 2025
ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಟಿಕೆಟ್ ಇಲ್ಲದೆ ಪ್ರಯಾಣಿಸಿದವರಿಗೆ ಶಾಕ್: 6.29 ಲಕ್ಷ ದಂಡ ವಸೂಲಿ