ಬೆಂಗಳೂರು: ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣ-2 (ಬ್ರಿಜೇಶ್ ಕಮಾರ್ ಆಯೋಗ)ರ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವು, ಇತ್ಯರ್ಥವಾಗಿರುವ ಜಲ ವಿವಾದದಲ್ಲಿ ನ್ಯಾಯ ಅಪೇಕ್ಷಿಸುತ್ತಿದ್ದ ಕರ್ನಾಟಕಕ್ಕೆ ಆಘಾತ ತಂದಿದೆ ಎಂಬುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೃಷ್ಣ ಜಲ ವಿವಾದ ನ್ಯಾಯಾಧೀಕರಣ-2ರ ಅಂತಿಮ ತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಕಳೆದ ಹತ್ತು ವರ್ಷಗಳಿಂದ ಒತ್ತಾಯ ಮಾಡುತ್ತಿದೆ. ಕೇಂದ್ರ ಸರ್ಕಾಟ ಗೆಜೆಟ್‌ನಲ್ಲಿ ಪ್ರಕಟಣೆ ಮಾಡದೇ ಇರುವುದರಿಂದ 200 ಟಿಎಂಸಿ ಕರ್ನಾಟಕದ ಪಾಲಿನ ನೀರು ರಾಜ್ಯಕ್ಕೆ ದಕ್ಕದೇ ಬಹುದೊಡ್ಡ ಅನ್ಯಾಯಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ಈ ಅವಧಿ ವಿಸ್ತರಣೆಯನ್ನು ಮರಳಿ ಪಡೆಯಬೇಕು. ಇಲ್ಲವೇ ಗೆಜೆಟ್‌ನಲ್ಲಿ ಪ್ರಕಟಿಸಲು ನ್ಯಾಯ ಯುತ ಕ್ರಮಕೈಗೊಳ್ಳಬೇಕು ಎಂಬುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಒತ್ತಾಯಿಸಿದ್ದಾರೆ.
BIG NEWS: ಶೀಘ್ರವೇ ‘ಕರ್ನಾಟಕ ಪೊಲೀಸರ ಟೋಪಿ’ ಬದಲು: ‘ಪೀಕ್ ಕ್ಯಾಪ್’ ವಿತರಣೆ