ಉತ್ತರ ಕನ್ನಡ: ಜಿಲ್ಲೆಯಲ್ಲಿ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆದಂತ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ವಜ್ರಹಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದ ಬಳಿಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರಿಗೆ ಯಾವುದೇ ಅವಕಾಶ ಸಿಗದ ಕಾರಣ ಕೂಲಿ ಕೆಲಸ ಮಾಡುತ್ತಿದ್ದರು.
ಇಂದು ಮನನೊಂದು ಯಲ್ಲಾಪುರ ತಾಲ್ಲೂಕಿನ ಕಾಡೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.