ಬೆಂಗಳೂರು:ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ ಶುರುವಾಗಿದೆ. ಸ್ವಾತಂತ್ರ್ಯೋತ್ಸವ ಆಯ್ತು, ಗಣೇಶೋತ್ಸವ ವಿವಾದವು ಮುಗಿತು. ಈಗ ಕನ್ನಡ ರಾಜೋತ್ಸವದ ಸರದಿ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡುವಂತೆ ಕೂಗು ಕೇಳಿ ಬಂದಿದೆ.
BIGG NEWS: ಕಾಂಗ್ರೆಸ್ ಸಮಾವೇಶ ನಡೆದ ಬಳಿಕ ಬಳ್ಳಾರಿ ಮೈದಾನ ಸ್ವಚ್ಛಗೊಳಿಸಿದ ಸಚಿವ ಶ್ರೀರಾಮುಲು
ಸ್ವಾತಂತ್ರ್ಯ ದಿನಾಚರಣೆಯ ರೀತಿಯೇ ಕನ್ನಡ ರಾಜ್ಯೋತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಕೋರ್ಟ್ ಆದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಎರಡಕಷ್ಟೇ ಅನುಮತಿ ನೀಡಲಾಗಿತ್ತು. ಹೀಗಾಗಿ ಇದೀಗ ಸರ್ಕಾರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಸಾಧ್ಯತೆ ಇದೆ.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ, ಈಗಾಗಲೇ ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ನಮ್ಮ ಜೊತೆ ಮಾತನಾಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಚರಿಸುವಂತೆ ಸಲಹೆ ನೀಡಿದ್ದಾರೆ.