ಬೆಂಗಳೂರು: ಉಗ್ರಗಾಮಿಗಳನ್ನು ಬೆಂಬಲಿಸಿದದೇಶದ ಒಳಗೆ ಅಭದ್ರತೆ, ಅಂತರ್ಯುದ್ಧ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸರ್ಕಾರವನ್ನು ಅಭಿನಂದಿಸಿದರು.
BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ
ಪಿಎಫ್ಐ ಬ್ಯಾನ್ ಹಿನ್ನೆಲೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಟಿ ರವಿ, ದೇಶ ವಿಭಜಕ ಶಕ್ತಿಗಳನ್ನು ಸರ್ಕಾರ ಬ್ಯಾನ್ ಮಾಡಿದೆ. ಇನ್ನು ಸಮಾಜದ ಸರದಿ. ಸರ್ಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆಯಾದರೂ ಇಷ್ಟು ಸಾಕಾಗುವುದಿಲ್ಲ. ಸಮಾಜ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.
ವಿದ್ರೋಹಿ ಹಾಗೂ ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀರಣ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು. ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರೂ, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ ಎಂದರು.
BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ
ಇನ್ನು ದೇಶದ ಭದ್ರತೆ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯವಿದೆ. ರಾಷ್ಟ್ರ ವಿರೋಧಿ ಹಾಗೂ ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕಾಗಿದೆ ಎಂದಿದ್ದಾರೆ.