ಚಿತ್ರದುರ್ಗ : ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಕೃಷಿ ಸಚಿವರು ವಿಫಲವಾಗಿದ್ದಾರೆ ಎಂದು ಬಿಜೆಪಿ ಹಿರಿಯೂರು ತಾಲೂಕು ಅಧ್ಯಕ್ಷ ಕೆ ಅಭಿನಂದನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ರೈತರು ಯೂರಿಯಾ ಕೊಳ್ಳಲು ಪರದಾಟ ನಡೆಸುತ್ತಿದ್ದು, ಸರ್ಕಾರ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿದೆ. ರಾಜ್ಯ ಸರ್ಕಾರ ರಸಗೊಬ್ಬರ ವಿತರಣೆ ಮಾಡುವಲ್ಲಿ ಮೊಂಡುತನ ಪ್ರದರ್ಶಿಸುತ್ತಿದ್ದು, ತನ್ನ ತಪ್ಪು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತ ದೃಷ್ಟಿ ಕಾಪಾಡಲು ರಾಜ್ಯಕ್ಕೆ 8.73 ಲಕ್ಷ ಟನ್ ಯೂರಿಯಾ ಪೂರೈಸಿದೆ. ಆದರೆ ಇಲ್ಲಿನ ರಾಜ್ಯ ಸರ್ಕಾರ ಸಮರ್ಪಕವಾಗಿ ವಿತರಿಸದೇ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವ ಹುನ್ನಾರ ನಡೆಸಿ, ರೈತರನ್ನು ಬೀದಿಗೆ ತಳ್ಳಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಪೂರೈಸಿರುವ 8.73ಲಕ್ಷ ಟನ್ ಗೊಬ್ಬರದಲ್ಲಿ 6.55 ಲಕ್ಷ ಟನ್ ಯೂರಿಯಾ ಮಾರಾಟ ಮಾಡಿರುವುದಾಗಿ ಕೃಷಿ ಸಚಿವರು ಹೇಳಿದ್ದಾರೆ. ಹಾಗಾದ್ರೆ ಉಳಿದ 1.94 ಮೆಟ್ರಿಕ್ ಟನ್ ಗೊಬ್ಬರ ಯಾರ ಕೈಸೇರಿದೆ ಎಂದು ಪ್ರಶ್ನಿಸಿದರು. ಒಂದು ವೇಳೆ ಗೋದಾಮಿನಲ್ಲಿ ದಾಸ್ತಾನುವಾಗಿದ್ದಾರೆ ವಿತರಣೆ ಮಾಡಲು ವಿಳಂಬ ಯಾಕೆ?. ಕೂಡಲೇ ರೈತರಿಗೆ ಯೂರಿಯಾ ಗೊಬ್ಬರ ಪೂರೈಕೆ ಮಾಡಲು ಸರ್ಕಾರ ಮುಂದಾಗಬೇಕು ಇಲ್ಲವಾದರೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು
ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ: ಕೃಷಿ ಇಲಾಖೆ ಮಾಹಿತಿ