ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ.
2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ ಹಾಗೂ ಹೆಚ್‌ಆರ್‌ಎಂಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು ಹೆಚ್‌ಆರ್‌ಎಂಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್‌ಆರ್‌ಎಂಎಸ್-1 ತಂತ್ರಾಂಶದಲ್ಲಿ ಲಭ್ಯವಿರುವ ತಮ್ಮ ಇಲಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರುಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ, ಅವಶ್ಯಕವಿದ್ದಲ್ಲಿ ಸರಿಪಡಿಸುವಂತೆ ಹಾಗೂ ಸೇರಿಸಲು ಸೂಚಿಸಲಾಗಿದೆ.
ಆದುದರಿಂದ, ಈ ಬಗ್ಗೆ ಸಂಬಂಧಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಹೆಚ್ಚಿನ ಗಮನ ಹರಿಸಿ, ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿಯೇ ಅನುಷ್ಠಾನಗೊಳಿಸುವಂತೆ ಹಾಗೂ ಸಿಬ್ಬಂದಿಗಳ ಇಎಸ್‌ಆರ್ ನಿರ್ವಹಣೆಯಲ್ಲಿ ಯಾವುದೇ ಅಡಚಣೆಯುಂಟಾಗಿದ್ದಲ್ಲಿ ಕೂಡಲೇ ಹೆಚ್‌ಆರ್‌ಎಂಎಸ್ ತಂಡವನ್ನು ಸಂಪರ್ಕಿಸಿ ಸರಿಪಡಿಸಿಕೊಂಡು ಸದರಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಉಲ್ಲೇಖಿತ (2) ರ ಪತ್ರದಲ್ಲಿ ಈಗಾಗಲೇ ತಮ್ಮಲ್ಲಿ ಕೋರಲಾಗಿತ್ತು. ಆದಾಗ್ಯೂ ಇಎಸ್‌ಆರ್ ಅನುಷ್ಠಾನದಲ್ಲಿ ಯಾವುದೇ ಪ್ರಗತಿಯನ್ನು ಕಂಡು ಬಂದಿರುವುದಿಲ್ಲ. ಇದೇ ರೀತಿ ಮುಂದುವರೆದಲ್ಲಿ ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿರುವ ಹೆಚ್‌ಆರ್‌ಎಂಎಸ್-2ನಲ್ಲಿ ವೇತನ ಪಡೆಯುವುದು ಕಷ್ಟಕರವಾಗುತ್ತದೆ. ಸೇವಾವಹಿಯು ಸರ್ಕಾರಿ ನೌಕರರ ಒಂದು ಪ್ರಮುಖ ಭಾಗವಾಗಿದ್ದು, ಹೆಚ್‌ಆರ್‌ಎಂಎಸ್ -2 ಅನುಷ್ಠಾನಗೊಳ್ಳಲು ವಿದ್ಯುನ್ಮಾನ ಸೇವಾ ವಹಿ (ಇಎಸ್‌ಆರ್) ಪೂರ್ಣಗೊಳ್ಳುವುದು ಮುಖ್ಯವಾಗಿರುತ್ತದೆ. ಆದುದರಿಂದ ವಿಶೇಷ ಅಭಿಯಾನದ ರೂಪದಲ್ಲಿ ಹೆಚ್ಚಿನ ಒತ್ತು ಕೊಟ್ಟು ಮಾರ್ಚ್ ಅಂತ್ಯದೊಳಗಾಗಿ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿಯೇ ಅನುಷ್ಠಾನಗೊಳಿಸುವ (ESR) ಕಾರ್ಯವನ್ನು ಪೂರ್ಣಗೊಳಿಸುವಂತೆ ಈ ಮೂಲಕ ಕೋರಿದೆ ಅಂತ ತಿಳಿಸಿದೆ.
BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024