ಬೆಂಗಳೂರು : ರಾಜ್ಯ ಸರ್ಕಾರವು ಸಿನಿ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ ನೀಡಿದೆ. ಈ ಕುರಿತು ಸರ್ಕಾರ ಅಧಿಕೃತ ಆದೇಶ ಕೂಡ ಹೊರಡಿಸಿದೆ.
ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿನ ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.