ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. ೫೦ ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ.

ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇ.50 ಹಾಗೂ ಭಾಗ-2 ರ ಪಠ್ಯ ಶೇ.50 ಒಟ್ಟು ಸೇರಿ ಶೇ.100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ‘ಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1 ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

Share.
Exit mobile version