ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ.
ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು.
1. ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು.
2. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು.
3. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು.
4. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು.
5. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಬದುದು
6. ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರವನ್ನ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC-AC ಒಳಗೊಂಡ ಒಂಬುಡ್ಸ್ಮನ್ ನೇಮಕ ಮಾಡಬೇಕು.
7. ಈ ಕಂಪೆನಿಗಳು ಸಾಲದ ಹೆಸರಲ್ಲಿ ಬಜ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ.
8. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Union Budget 2025: ಇಂದಿನ ಕೇಂದ್ರ ಬಜೆಟ್ ಬುಲೆಟ್ ಗಾಯಗಳಿಗೆ ಬ್ಯಾಂಡ್-ಏಡ್ ಮಾಡಿದಂತೆ: ರಾಹುಲ್ ಗಾಂಧಿ
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab