ಬೆಂಗಳೂರು: ಸಹಕಾರ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದ್ದರು. ಇದೀಗ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರವನ್ನು ರಾಜ್ಯಪಾಲರ ಕಚೇರಿಯಿಂದ ಬರೆದು ತಿಳಿಸಲಾಗಿದೆ. ಅದರಲ್ಲಿ ಮೇಡಂ,
ಮಾನ್ಯ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪದಚ್ಯುತಗೊಳಿಸಲು ಮಾನ್ಯ ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಇದರೊಂದಿಗೆ ಕಳುಹಿಸಲು ನನಗೆ ಸೂಚಿಸಲಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿನ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಇಷ್ಟು ಮಾತ್ರ ‘ಫೈರ್ ಸೇಫ್ಟಿ ಪರ್ಮಿಷನ್ ಮಾನದಂಡ’ ಪೂರ್ಣ