ಬೆಂಗಳೂರು : ಒಂದೆಡೆ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇನ್ನೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿತ್ತು.
ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಸಮಾಜಿಕ ಜಾಲತಾಣ ಟ್ವೀಟ್ ನಲ್ಲಿ, ನಿಮ್ಮ ಸಾಧನಾ ಸಮಾವೇಶ ಮಾಡಿದ್ದು ಸಾಕು, ನಿಮ್ಮ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ನಾಟಕವು ಸಾಕು. ಮೊದಲು ರಾಜ್ಯದ ಉದ್ದಗಲಕ್ಕೂ ಭಾರಿ ಮಳೆ ಸುರಿಯುತ್ತಿದ್ದು, ಹಲವಾರು ಅವಾಂತರ ಸೃಷ್ಟಿಯಾಗಿವೆ. ಮೊದಲು ಮಳೆಯ ಅನಾಹುತದ ಕಡೆ ಗಮನ ಕೊಡಿ ಎಂದು ಕಿಡಿಕಾರಿದ್ದಾರೆ.
ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ. ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ. ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜನೆ ಮಾಡಿ ತಕ್ಷಣವೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಕಿಡಿ ಕಾರಿದ್ದಾರೆ.
ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ. ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ. ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2025