ಬೆಳಗಾವಿ: ನಿನ್ನೆ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಗುಜರಾತ್ ನಲ್ಲಿ ಬಿಜೆಪಿ ಗೆದ್ದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.
BIGG NEWS: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣವನ್ನ ತಿರುಚಿ ಹರಿಬಿಟ್ಟ ಕಿಡಿಗೇಡಿಗಳು; ದೂರು ದಾಖಲು
ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್ ಕೂಡ ಅಲ್ಲ. ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷ ಶೇ.13ರಷ್ಟು ವೋಟ್ ಪಡೆದಿದೆ. ಆಮ್ ಪಡೆದಿರುವ 13% ಮತಗಳು ಕಾಂಗ್ರೆಸ್ನದ್ದು. ಇದರಿಂದಾಗಿ ಪಕ್ಷಕ್ಕೆ ನೇರವಾಗಿ ನಮಗೆ ಹೊಡೆತ ಬಿದ್ದಿದೆ.
BIGG NEWS: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣವನ್ನ ತಿರುಚಿ ಹರಿಬಿಟ್ಟ ಕಿಡಿಗೇಡಿಗಳು; ದೂರು ದಾಖಲು
ಗುಜರಾತ್ನಲ್ಲಿ ಕಾಂಗ್ರೆಸ್ ಪಕ್ಷ 60-70 ಕ್ಷೇತ್ರಗಳಲ್ಲಿ ಗೆಲ್ಲಬೇಕಿತ್ತು ಎಂದರು.ಆಮ್ ಆದ್ಮಿ ಪಕ್ಷದಿಂದ ಬಹಳಷ್ಟು ಸೀಟ್ ನಾವು ಕಳೆದುಕೊಂಡಿದ್ದೇವೆ. ಮತ ವಿಭಜನೆ ಆಗಿರುವುದರಿಂದ ಬಿಜೆಪಿ ಗೆದ್ದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತವರು ರಾಜ್ಯದಲ್ಲಿ ನಾವು ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಖರ್ಗೆ, ಪ್ರಿಯಾಂಕಾ ಪ್ರಚಾರ ಮಾಡಿದ್ದರು ಎಂದು ಸತೀಶ್ ಜಾರಕಿಹೊಳಿ ಹೇಳಿದರು.