Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ | Harmanpreet Kaur

BREAKING: ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ‘ಪದ್ಮವಿಭೂಷಣ’ ಪ್ರದಾನ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ
KARNATAKA

BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ಔಷಧಿಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಕಿಂಗ್ ಮಾಹಿತಿಯನ್ನು ಬಹಿರಂಗಪಡಿಸಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಮಾಹಿತಿ ನೀಡಿದ್ದು,  ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ  ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.  ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ.

ಔಷಧ ಆಡಳಿತ:

ಔಷಧ ಆಡಳಿತ ವಿಭಾಗದ ಅಮಲು ಜಾರಿ ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಮಾರ್ಚ್‌ 2025ರ ಮಾಹೆಯಲ್ಲಿ ಒಟ್ಟು 1,891 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆದಿರುತ್ತಾರೆ. ಸದರಿ ಔಷಧ ಮಾದರಿಗಳನ್ನು ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಅವುಗಳಲ್ಲಿ 1,298 ಉತ್ತಮ ಗುಣಮಟ್ಟದ ಔಷಧಗಳೆಂದು ಘೋಷಿತವಾಗಿವೆ. ಮತ್ತು 41 ಅನುತ್ತಮ ಗುಣಮಟ್ಟದ ಔಷಧಿಗಳೆಂದು ಘೋಷಿತವಾಗಿದೆ.

2024-25ನೇ ಸಾಲಿನಲ್ಲಿ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮದ 1940 ಮತ್ತು ಅದರಡಿಯ ನಿಯಾಮಾವಳಿಗಳನ್ನು ಉಲ್ಲಂಘನೆ ಮಾಡಿದ ಸಂಸ್ಥೆಗಳ ವಿರುದ್ದ  ಫೆಬ್ರವರಿ-2025ರ ಮಾಹೆಯಲ್ಲಿ ಒಟ್ಟು 10 ಮತ್ತು ಮಾರ್ಚ್‌ 2025ರ ಮಾಹೆಯಲ್ಲಿ ಒಟ್ಟು 18 ಮೊಕದ್ದಮೆಗಳನ್ನು  ವಿವಿಧ ನ್ಯಾಯಾಲಯಗಳಲ್ಲಿ ದಾಖಲಿಸಲಾಗಿದೆ.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣಕ್ಕೆ ಸಂಬಂಧಿಸಿದಂತೆ 196 ಬ್ಯಾಚ್‌ನ ಮಾದರಿಗಳಲ್ಲಿ 113 ಅನುತ್ತಮ ಗುಣಮಟ್ಟದೆಂದು ಘೋಷಿತವಾಗಿದೆ. ಈ ಸಂಬಂಧ ತಯಾರಿಕಾ ಸಂಸ್ಥೆಯಾದ M/s Paschim Banga Pharmaceuticals ವಿರುದ್ಧ ಮಾರ್ಚ್‌ 2025ರ ಅಂತ್ಯದವರೆಗೆ ವಿವಿಧ ನ್ಯಾಯಾಲಯಗಳಲ್ಲಿ 78 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಇದಲ್ಲದೇ ಅನುತ್ತಮ ಗುಣಮಟ್ಟದ ಔಷಧವೆಂದು ಘೋಷಿತವಾದ ಹಾಗೂ ಇತರೆ ಉಲ್ಲಂಘನೆಗಾಗಿ ವಿವಿಧ ತಯಾರಿಕ ಸಂಸ್ಥೆಗಳ ವಿರುದ್ಧ 43 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಅನುಮತಿ ನೀಡಲಾಗಿದೆ.

ಔಷಧ ಆಡಳಿತದ ಅಮಲುಜಾರಿ ಅಧಿಕಾರಿಗಳು ಫೆಬ್ರವರಿ 2025ರ ಮಾಹೆಯಲ್ಲಿ ಒಟ್ಟು 1,872 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆದಿರುತ್ತಾರೆ. 2,078 ಔಷಧ ಮಳಿಗೆಗಳನ್ನು ಪರಿವೀಕ್ಷಣೆ ಕೈಗೊಂಡಿರುತ್ತಾರೆ. ಅವುಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಒಟ್ಟು 215 ಸಂಸ್ಥೆಗಳ ಪರವಾನಿಗೆಗಳನ್ನು ಅಮಾನತ್ತುಗೊಳಿಸಲಾಗಿದೆ.

ರಾಜ್ಯದಲ್ಲಿ NSQ ಬಂದಂತಹ ಪ್ರಕರಣಗಳಲ್ಲಿ ಫೆಬ್ರವರಿ ಮತ್ತು ಮಾರ್ಚ್ -2025ರ  ಮಾಹೆಗಳಲ್ಲಿ ವಿಶೇಷ ಅಭಿಯಾನ ಕೈಗೊಂಡು ಸುಮಾರು ರೂ 24,29,479/- ಮೌಲ್ಯದ ಅನುತ್ತಮ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ.

ಸುಧಾರಣಾ ಕ್ರಮಗಳು:

ಅನುತ್ತಮ ಗುಣಮಟ್ಟದೆಂದು ಘೋಷಿತವಾದ ಔಷಧಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗದಂತೆ ತಡೆಯುವ ನಿಟ್ಟಿನಲ್ಲಿ ಸದರಿ ದಾಸ್ತಾನುಗಳನ್ನು ಹಿಂಪಡೆಯಲು, ಚಿಲ್ಲರೆ ಔಷಧ ಮಳಿಗೆಗಳು / ಸಗಟು ಮಾರಾಟಗಾರರು / ತಯಾರಿಕಾ ಸಂಸ್ಥೆಗಳ ವಿವರಗಳನ್ನು ಗಣಕೀಕರಣಗೊಳಿಸಲಾಗುತ್ತಿದೆ.  ಶೀಘ್ರದಲ್ಲಿ ಸದರಿ ತಂತ್ರಾಂಶವನ್ನು ಜಾರಿಗೆ ತರಲಾಗುವುದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

Share. Facebook Twitter LinkedIn WhatsApp Email

Related Posts

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

2 Mins Read

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

2 Mins Read

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

2 Mins Read
Recent News

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ | Harmanpreet Kaur

BREAKING: ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ‘ಪದ್ಮವಿಭೂಷಣ’ ಪ್ರದಾನ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

State News
KARNATAKA

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು; ಜೆಡಿಎಸ್ ಪಕ್ಷದ ರಾಜ್ಯದ ಅಧ್ಯಕ್ಷರು ಹಾಗೂ ಕೇಂದ್ರದ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದ ಮೇರೆಗೆ ಜೆಡಿಎಸ್ ರಾಜ್ಯ ಕೋರ್…

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

BIG NEWS : ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.