ಬೆಂಗಳೂರು: ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಿಗೆಗೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವಂತ ರಾಜ್ಯಪಾಲರ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಿಎಂ ಸಿದ್ಧರಾಮಯ್ಯ ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಿಗೆ ನೀಡಿದ್ದಾರೆ. ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂಬುದಾಗಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಬೆಂಗಳೂರಿನ ಉದ್ಯಮಿ ಎಂ.ಪಿ ವೇಣುಗೋಪಾಲ ಎಂಬುವರು ಸಲ್ಲಿಸಲಾಗಿತ್ತು.
ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠವು ವಜಾಗೊಳಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.
Good News ; ಪಿಂಚಣಿದಾರರಿಗೆ ಶುಭ ಸುದ್ದಿ ; ಅ. 1ರಿಂದ ‘NPS’ ನಿಯಮ ಬದಲಾವಣೆ, ಅನೇಕ ಪ್ರಯೋಜನ!
BREAKING: ಧರ್ಮಸ್ಥಳ ತಲೆ ಬುರುಡೆ ಕೇಸ್: ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತೆರಡು ಕಳೇಬರಹ ಪತ್ತೆ