ಬೆಂಗಳೂರು: ನಗರದಲ್ಲಿ ರಾತ್ರಿಡಿ ಸುರಿದ ಭಾರೀ ಮಳೆಗೆ ಹೆದ್ದಾರಿಗಳು ಕಾಲುವೆಯಂತಾಗಿವೆ, ಇದರಿಂದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ. ಮಂಡ್ಯದ ಇಂಡುವಾಳು ಸಮೀಪ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ.
BREAKING NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ
ಹೀಗಾಗಿ ಜನರಿಗೆ ಓಡಾಟಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ಸುಮಾರು ೩-೪ ಅಡಿ ನೀರು ನಿಂತಿದೆ. ಇಂಡುವಾಳು ಸಮೀಪ ಕೆರೆ ತುಂಬಿದ ಹರಿದ ಹಿನ್ನೆಲೆಯಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿಗೆ ನೀರು ಹರಿದಿದೆ. ಹೀಗಾಗಿ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಿದೆ.
ಇನ್ನು ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಬಂದ್ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ರಾತ್ರಿಯಿಂದ ಬೆಂಗಳೂರು, ಮಂಡ್ಯ, ತುಮಕೂರು, ದಾವಣಗೆರೆಗೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
BREAKING NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳಲ್ಲಿ ಭಾರೀ ಮಳೆಯಾಗಿದ್ದು, ಯಲಹಂಕ 75.5 ಮಿ.ಮೀ, ಅಟ್ಟೂರು 70 ಮಿ.ಮೀ, ಚೌಡೇಶ್ವರಿ ವಾರ್ಡ್ 67.5 ಮಿ.ಮೀ, ಆರ್.ಆರ್.ನಗರ 66.5 ಮಿ.ಮೀ, ಸಂಪಗಿರಾಮನಗರದಲ್ಲಿ 66 ಮಿ.ಮೀ ಮಳೆ ಆಗಿದೆ.