ಬಾಗಲಕೋಟೆ: ಎಸ್ಸಿ, ಎಸ್ಟಿ ಮೀಸಲಾತಿ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದ್ದು ಕಾನೂನು ಬದ್ಧವಾಗಿದೆ ಎಂದು ಹೇಳಿದ್ದಾರೆ.
‘ಮೌಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ |Rain Alert Karnataka
ರಾಜ್ಯಸಭೆಯಲ್ಲಿ ಸಚಿವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಅವರು ತಿರುಗೇಟು ನೀಡಿದರು. ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಪ್ರಕರಣದಲ್ಲಿ ಕೊಟ್ಟಿದ್ದು ಸರಿ ಅಂತ ಮೆಜಾರಿಟಿ ಪ್ರಕಾರ ಕ್ಲಿಯರ್ ಆಯಿತು. ಹೀಗಾಗಿ ಇವತ್ತು ಎಲ್ಲೋ ಒಂದು ಕಡೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ರು ಅಂದ್ರೆ ನಾವು ಮಾಡಿದ್ದು ಸರಿಯಲ್ಲ ಅಂತಲ್ಲ. ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು ಕಾನೂನು ಬದ್ದವಾಗಿದೆ ಎಂದರು.
‘ಮೌಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ |Rain Alert Karnataka
ಇನ್ನು ಗುಜರಾತ್ ಮಾದರಿ ರಾಜ್ಯದಲ್ಲೂ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪ್ರತಿಯೊಂದು ಹಂತದಲ್ಲೂ ಒಂದೊಂದು ಪ್ರಯೋಗ ಆಗುತ್ತದೆ. ಬೇರೆ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಸರ್ವೆ ಮಾಡುತ್ತಾರೆ. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ವ್ಯವಸ್ಥೆ ಇದೆ. ಕೇವಲ ಕರ್ನಾಟಕವಷ್ಟೇ ಅಲ್ಲ, ಎಲ್ಲಾ ಕಡೆಯೂ ಅನ್ವಯ ಆಗುತ್ತೆ ಎಂದು ಹೇಳಿದರು.