ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧವೇ ಪತ್ನಿ ಹಾಗೂ ಪುತ್ರಿ ಸಿಡಿದೆದ್ದಿದ್ದಾರೆ. ಸಿ.ಪಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಪುತ್ರಿ, ಪತ್ನಿ ದೂರು ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವಂತ ರಣದೀಪ್ ಸುರ್ಜೇವಾಲಾ ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿ.ಪಿ ಯೋಗೇಶ್ವರ್ ಅವರ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಭೇಟಿಯಾಗಿ ಈ ದೂರು ಸಲ್ಲಿಸಿದ್ದಾರೆ.
ಸುರ್ಜೇವಾಲಾ ಅವರಿಗೆ ಸಲ್ಲಿಸಿರುವಂತ ದೂರಿನಲ್ಲಿ ಸಿ.ಪಿ ಯೋಗೇಶ್ವರ್ ತಮ್ಮ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಪದೇ ಪದೇ ಅವರು ಕೇಸ್ ಹಾಕಿ ಕೋರ್ಟ್, ಕಚೇರಿ ಅಲೆಸುತ್ತಿದ್ದಾರೆ. ನಾವು ಕಾನೂನಾತ್ಮಕವಾಗಿ ದೂರವಾಗಿಲ್ಲದ ಕಾರಣ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ಸಿ.ಪಿ ಯೋಗೇಶ್ವರ್ ನೀಡುತ್ತಿರುವಂತ ಕಿರುಕುಳ ಸರಿಪಡಿಸುವಂತೆ ಮನವಿ ಮಾಡಿದ್ದಾರೆ.
SHOCKING: ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು
BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ